ಉಡುಪಿ; ವಿದ್ಯಾರ್ಥಿಗಳನ್ನು ಅಪಹರಣ; ನಾಲ್ವರು ಅರೆಸ್ಟ್

ಉಡುಪಿ;ಕ್ಯಾಟರಿಂಗ್ ಕೆಲಸ ಮುಗಿಸಿ ಮಣಿಪಾಲ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ವಿದ್ಯಾರ್ಥಿಗಳನ್ನು ತಂಡವೊಂದು ಅಪಹರಣ ಮಾಡಿ, ಹಲ್ಲೆ ನಡೆಸಿ ದರೋಡೆ ಮಾಡಿದ ಘಟನೆ ತಡರಾತ್ರಿ ನಗರದ ಕಲ್ಸಂಕ ಜಂಕ್ಷನ್ ಬಳಿ ನಡೆದಿದೆ.




ಉಡುಪಿ ನರ್ಸಿಂಗ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಾದ ಬಿಜು ಮತ್ತು ಮಹಮ್ಮದ್ ಸಿನಾನ್ ಕರಾವಳಿ ಬೈಪಾಸ್ ಬಳಿಯಿರುವ ಹೋಟೆಲಿನಲ್ಲಿ ಕ್ಯಾಟರಿಂಗ್ ಕೆಲಸ ಮುಗಿಸಿ ಮಣಿಪಾಲದ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ಕಲ್ಸಂಕ ಜಂಕ್ಷನ್ ಬಳಿ ಕರಾವಳಿ ಬೈಪಾಸ್ ಕಡೆಯಿಂದ ಕಾರು ಬಂದಿದೆ.

ಕಾರಿನಲ್ಲಿ ಬಂದ ನಾಲ್ಕು ಮಂದಿಯ ತಂಡ ಈ ಅಪಹರಣ ಮತ್ತು ದರೋಡೆ ಯತ್ನ ನಡೆಸಿದ್ದು,ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಈ ವೇಳೆ ಓರ್ವ ಆರೋಪಿಗಳಿಂದ ತಪ್ಪಿಸಿಕೊಂಡು ಬಂದು ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.

ಉಡುಪಿ ನಗರ ಠಾಣಾ ಪೋಲಿಸರು ತಂಡದವರನ್ನು ವಶಕ್ಕೆ ಪಡೆದು ಕೇಸ್ ದಾಖಲಿಸಿದ್ದಾರೆ.







ಟಾಪ್ ನ್ಯೂಸ್