ಉಡುಪಿ:ನಗರದ ಪ್ಯಾರಾ ಮೆಡಿಕಲ್ ಕಾಲೇಜೊಂದರ ಶೌಚಾಲಯದಲ್ಲಿ ಮೊಬೈಲ್ ವಿಡಿಯೋ ಚಿತ್ರೀಕರಣ ಮಾಡಿದ್ದಾರೆ ಎಂಬ ಘಟನೆಗೆ ಸಂಬಂಧಪಟ್ಟಂತೆ ಮೂವರು ವಿದ್ಯಾರ್ಥಿನಿಯರ ವಿರುದ್ಧ ಪ್ರಕರಣ ದಾಖಲಾಗಿದೆ.
ಮಲ್ಪೆ ಪೊಲೀಸ್ ಠಾಣೆಯಲ್ಲಿ ಕಾಲೇಜು ಆಡಳಿತ ಮಂಡಳಿ, ಮೂವರು ವಿಧ್ಯಾರ್ಥಿನಿಯರ ವಿರುದ್ದ ಪ್ರಕರಣ ದಾಖಲಿಸಲಾಗಿದೆ. ಭಾರತೀಯ ದಂಡ ಸಂಹಿತೆ 509, 204, 175,34, ಮತ್ತು 66(ಇ) ಅಡಿ ದೂರು ದಾಖಲಾಗಿದೆ.
ಉಡುಪಿಯ ಕಾಲೇಜೊಂದರ ಟಾಯ್ಲೆಟ್‌ನಲ್ಲಿ ಮೂವರು ವಿದ್ಯಾರ್ಥಿನಿಯರಿಂದ ಭಿನ್ನ ಕೋಮಿಗೆ ಸೇರಿದ ಯುವತಿಯ ಚಿತ್ರೀಕರಣ ಮಾಡಲಾಗಿತ್ತು. ಕಾಲೇಜಿನ 3 ಮಂದಿ ವಿದ್ಯಾರ್ಥಿನಿಯರು ಕ್ಯಾಮರದ ಮೂಲಕ ಇನ್ನೊಬ್ಬ ವಿದ್ಯಾರ್ಥಿನಿಯನ್ನು ಚಿತ್ರೀಕರಿಸಿದ್ದರು. ಇದು ಕಾಲೇಜಿನ ಗಮನಕ್ಕೆ ಬಂದು ಆರೋಪಿತ ವಿದ್ಯಾರ್ಥಿನಿಯರನ್ನು ಅಮಾನತುಗೊಳಿಸಲಾಗಿದೆ.ಮೊಬೈಲ್‌ನಲ್ಲಿ ಚಿತ್ರೀಕರಣ ಮಾಡಿರುವ 3 ಮಂದಿ ವಿದ್ಯಾರ್ಥಿನಿಯರು ತಪ್ಪೊಪ್ಪಿಕೊಂಡಿದ್ದಾರೆ. ತಮಾಷೆಗಾಗಿ ವೀಡಿಯೋ ಮಾಡಿರುವುದಾಗಿ ಮೂವರು ಲಿಖಿತವಾಗಿ ಹೇಳಿದ್ದಾರೆ ಎಂದು ಕಾಲೇಜಿನ ಆಡಳಿತ ಮಂಡಳಿ ಘಟನೆ ಬಗ್ಗೆ ಸ್ಪಷ್ಟನೆ ನೀಡಿತ್ತು.ಇದರ ಬೆನ್ನಲ್ಲೇ ಕೇಸ್ ದಾಖಲಾಗಿದೆ ಎಂದು ವರದಿಯಾಗಿದೆ.
ಇದಲ್ಲದೆ ಕಾಲೇಜಿನ ಶೌಚಾಲಯದಲ್ಲಿ ಹಿಡನ್ ಕ್ಯಾಮೆರಾ ಮೂಲಕ ವಿಡಿಯೋ ಚಿತ್ರೀಕರಿಸಿ ಫಾರ್ವಡ್ ಮಾಡಿದ್ದಾರೆ ಎಂದು ಎಡಿಟ್ ಮಾಡಿದ ವಿಡಿಯೋ ಅಪ್ಲೋಡ್ ಮಾಡಿ ಟ್ವಿಟ್ಟರ್ ನಲ್ಲಿ ಸುಳ್ಳು ಸುದ್ದಿ ಹಂಚಿಕೆ ಬಗ್ಗೆಯೂ ಪ್ರತ್ಯೇಕ ದೂರು ದಾಖಲಾಗಿದೆ.