ಪಡುಬಿದ್ರೆ; ಒಂದೇ ದಿನ ಮನೆಯಲ್ಲಿ ತಂದೆ- ಮಗ ಸಾವು; ಅಪರೂಪದ ಘಟನೆ

ಉಡುಪಿ;ಒಂದೇ ದಿನ ಒಂದೇ‌ ಮನೆಯಲ್ಲಿ ತಂದೆ ಮತ್ತು ಮಗ ಮೃತಪಟ್ಟ ಘಟನೆ ನಡೆದಿದೆ.

ಪಡುಬಿದ್ರಿ ಕಂಚಿನಡ್ಕದ ಸಂಜೀವ(72) ಹಾಗೂ ಅವರ ಪುತ್ರ ಉದಯ (45) ಒಂದೇ ದಿನ ಸಾವನ್ನಪ್ಪಿದ ಅಪರೂಪದ ಘಟನೆ ನಡೆದಿದೆ.

ಸಂಜೀವ ಹಾಗೂ ಉದಯ್ ಅವರು ಚಾಲಕರಾಗಿ ಕೆಲಸ ಮಾಡುತ್ತಿದ್ದರು.ಸಂಜೀವ ಅವರು 40 ವರ್ಷ ಹಾಗೂ ಉದಯ 20 ವರ್ಷ ಚಾಲಕರಾಗಿ ದುಡಿದಿದ್ದರು.

ಸಂಜೀವ್ ಅವರು ಕೆಲವು ವರ್ಷಗಳಿಂದ ಅನಾರೋಗ್ಯಕ್ಕೆ ತುತ್ತಾಗಿ ಹಾಸಿಗೆ ಹಿಡಿದಿದ್ದರು.

ಉದಯ ಕೆಲವು ದಿನಗಳ ಹಿಂದೆ ಜ್ವರದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಶನಿವಾರ ನಿಧನರಾಗಿದ್ದರು. ಅವರ ಅಂತ್ಯ ಸಂಸ್ಕಾರ ಪೂರ್ಣಗೊಂಡ ಬಳಿಕ ಹಾಸಿಗೆ ಹಿಡಿದಿದ್ದ ಸಂಜೀವ ಅವರೂ ಸಾವನ್ನಪ್ಪಿದ್ದಾರೆ‌.

ಬಡತನದಲ್ಲಿ ಜೀವಿಸುತ್ತಿದ್ದ ಈ ಕುಟುಂಬಕ್ಕೆ ಇಬ್ಬರ ಅಗಲಿಕೆ ದೊಡ್ಡ ಆಘಾತವನ್ನು ನೀಡಿದೆ.

ಟಾಪ್ ನ್ಯೂಸ್

ಹಿಂದೂ ಯುವತಿಯನ್ನು “ಕೇರಳ ಸ್ಟೋರಿ” ವೀಕ್ಷಿಸಲು ಕರೆದೊಯ್ದ ಸಂಸದೆ ಪ್ರಜ್ಞಾ ಸಿಂಗ್; ಆಕೆ ಸಿನಿಮಾ ನೋಡಿದ ಮರುದಿನವೇ ತನ್ನ ಮುಸ್ಲಿಂ ಪ್ರೇಮಿಯೊಂದಿಗೆ ಪರಾರಿ!- ವರದಿ

ಭೋಪಾಲ್‌; 19 ವರ್ಷದ ಹಿಂದೂ ಸಮುದಾಯದ ನರ್ಸಿಂಗ್ ವಿದ್ಯಾರ್ಥಿನಿ ತನ್ನ ನಿಗದಿಯಾಗಿದ್ದ ಮದುವೆಗೆ

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ; ಕರಾವಳಿ ಜಿಲ್ಲೆಗೆ ಚಂಡಮಾರುತದ ಭೀತಿ, ಬಿರುಗಾಳಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಉಡುಪಿ;ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಕರವಾಳಿ ಜಿಲ್ಲೆಗಳಿಗೆ ಚಂಡಮಾರುತದ ಭೀತಿ ಎದುರಾಗಿದೆ. ಅರಬ್ಬಿ

ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ತಡೆಗೆ “ಆ್ಯಂಟಿ ಕಮ್ಯುನಲ್‌ ವಿಂಗ್” ಸ್ಥಾಪನೆ; ಹೇಗಿರಲಿದೆ ಇದರ ರೂಪುರೇಷೆ? ಗೃಹಸಚಿವರು ಹೇಳಿದ್ದೇನು?

ಮಂಗಳೂರು:ನೈತಿಕ ಪೊಲೀಸ್ ಗಿರಿ ತಡೆಗೆ ಮಂಗಳೂರು ನಗರದಲ್ಲಿ ಆ್ಯಂಟಿ ಕಮ್ಯುನಲ್‌ ವಿಂಗ್ ಆರಂಭಿಸಲು

Developed by eAppsi.com