ಉಡುಪಿ; ತಾಯಿ, ಮಕ್ಕಳ ಕೊಲೆ ಪ್ರಕರಣ; ಎಸ್ಪಿಯಿಂದ ಮಹತ್ವದ ಮಾಹಿತಿ

ಉಡುಪಿ: ನೇಜಾರಿನಲ್ಲಿ ತಾಯಿ ಮಕ್ಕಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಪ್ರವೀಣ್ ಅರುಣ್ ಚೌಗಲೆ(39) ಎಂಬಾತನನ್ನು ಬಂಧಿಸಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ.ಅರುಣ್ ತಿಳಿಸಿದ್ದಾರೆ.

ಇಂದು ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್ಪಿ ಡಾ.ಕೆ.ಅರುಣ್, ಮಂಗಳೂರು ಏರ್ ಇಂಡಿಯಾದಲ್ಲಿ ಕ್ಯಾಬಿನ್ ಕ್ರೂ ಮೆಂಬರ್ ಆಗಿ ಕೆಲಸ ಮಾಡುತ್ತಿದ್ದ. ಆರೋಪಿ ಪ್ರವೀಣ್ ಗಗನಸಖಿ ಅಯ್ನಾಝ್ ಳನ್ನು ಕೊಲ್ಲುವ ಉದ್ದೇಶದಿಂದ ಹೋಗಿದ್ದ, ತಡೆಯಲು ಬಂದ ಉಳಿದ ಮೂವರನ್ನು ಕೊಲೆ ಮಾಡಿದ್ದಾನೆ ಎಂದು ಹೇಳಿದ್ದಾರೆ.

ಮೇಲ್ನೋಟಕ್ಕೆ ಹತ್ಯೆಗೆ ಮೂರ್ನಾಲ್ಕು ಕಾರಣಗಳು ಇರುವ ಸಾಧ್ಯತೆಯಿದೆ. ಸಂಪೂರ್ಣ ತನಿಖೆ ಮಾಡದೆ ಕಾರಣ ಹೇಳಲು ಸಾಧ್ಯವಿಲ್ಲ. ಅವನ ಉದ್ದೇಶ ಆಯ್ನಾಸ್ ಕೊಲೆ ಮಾಡುವುದಾಗಿತ್ತು. ಆದರೆ, ಈ ವೇಳೆ ಆರೋಪಿ ತಪ್ಪಿಸಿಕೊಳ್ಳಲು ಮತ್ತು ಸಾಕ್ಷಿ ನಾಶ ಮಾಡಲು ಉಳಿದವರನ್ನು ಕೊಲೆ ಮಾಡಿರುವ ಬಗ್ಗೆ ಒಪ್ಪಿಕೊಂಡಿದ್ದಾನೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್