ಉಡುಪಿ; ಹೊಟೇಲ್ ಆರಂಭಿಸಿದ ತೃತೀಯ ಲಿಂಗಿ ಗೆಳತಿಯರು

ಉಡುಪಿ;ಬಸ್​ ನಿಲ್ದಾಣದ ಪಕ್ಕದಲ್ಲಿ ಮೂವರು ತೃತೀಯ ಲಿಂಗಿಯರು ಸೇರಿ ಹೊಟೇಲ್​ ಪ್ರಾರಂಭಿಸುವ ಮೂಲಕ ದುಡಿಮೆಗೆ ಇಳಿದಿದ್ದು ಮಾದರಿ ಕೆಲಸ‌ ಮಾಡಿದ್ದಾರೆ.

ಪೂರ್ವಿ, ವೈಷ್ಣವಿ ಮತ್ತು ಚಂದನಾ ಎಂಬ ಹೆಸರಿನ ಮೂವರು ತೃತೀಯ ಲಿಂಗಿಗಳು ಉಡುಪಿ ಬಸ್​ ನಿಲ್ದಾಣದ ಪಕ್ಕದಲ್ಲಿ ಹೊಸದಾಗಿ ಹೋಟೆಲ್​ ತೆರೆದಿದ್ದಾರೆ.

ಈ ಹೋಟೆಲ್ ರಾತ್ರಿ ಮಾತ್ರ ತೆರೆದಿರುತ್ತದೆ.ರಾತ್ರಿ ಪಾಳಯದಲ್ಲಿ ಕೆಲಸ ಮಾಡುವವರಿಗೆ, ರಾತ್ರಿ ಆಹಾರ ಸಿಗದೆ ಪರದಾಡುತ್ತಿರುತ್ತಾರೆ.ಹೀಗಾಗಿ ಇವರಿಗೆ ಅನುಕೂಲವಾಗಲೆಂದು ಮಧ್ಯರಾತ್ರಿ 1 ಗಂಟೆಯಿಂದ ಬೆಳಿಗ್ಗೆ 7ಗಂಟೆಯವರೆಗೆ ಹೋಟೆಲ್​ ತೆರಯಲಾಗುತ್ತದೆ. ಇದು ದೂರದ ಊರಿಂದ ಪ್ರಯಾಣಿಸುವ ಪ್ರಯಾಣಿಕರಿಗೆ ಅನುಕೂಲವಾಗಲಿದೆ.

ರಾತ್ರಿ ಸಮಯದಲ್ಲಿ ಉಡುಪಿಯಲ್ಲಿ ಎಲ್ಲ ಹೋಟೆಲ್​ಗಳು ಬಂದಾಗಿರುತ್ತವೆ.ಈ ಸಮಯದಲ್ಲಿ ರಾತ್ರಿ ಪ್ರಯಾಣಿಕರಿಗೆ ಮತ್ತು ರಾತ್ರಿ ಪಾಳಯದಲ್ಲಿ ಕೆಲಸ ಮಾಡುವ ಜನರಿಗೆ ಆಹಾರ ಸಿಗುವುದಿಲ್ಲ. ಹೀಗಾಗಿ ಮೂವರು ತೃತೀಯ ಲಿಂಗಿಗಳು ಪ್ರಾರಂಭಿಸಿದ ಈ ಹೋಟೆಲ್​ ಜನರಿಗೆ ತುಂಬಾ ಅನುಕೂಲಕರವಾಗಿದೆ.

ಟಾಪ್ ನ್ಯೂಸ್

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿ ವಿಕೃತಿ ಮೆರೆದ ಆಟೋ ಚಾಲಕ; ಕೃತ್ಯವನ್ನು ಕಂಡು ಪೊಲೀಸರಿಗೆ‌ ಮಾಹಿತಿ ನೀಡಿದ ವಿದ್ಯಾರ್ಥಿನಿಯರು

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿದ ಆಟೋ ಚಾಲಕ; ಕೃತ್ಯವನ್ನು

Developed by eAppsi.com