ವಿಡಿಯೋ ಚಿತ್ರೀಕರಣ ಪ್ರಕರಣ: ಉಡುಪಿಗೆ ಆಗಮಿಸಿದ ಸಿಐಡಿ ತಂಡ

ಉಡುಪಿ;ಪ್ಯಾರಾ ಮೆಡಿಕಲ್ ಕಾಲೇಜಿನ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿ ತನಿಖೆಗೆ ಸಿಐಡಿ ಪೊಲೀಸರು ಉಡುಪಿಗೆ ಆಗಮಿಸಿದ್ದಾರೆ.

ಸಿಐಡಿ ವಿಭಾಗದ ಡಿವೈಎಸ್ಪಿ ಅಂಜುಮಾಲಾ ನಾಯಕ್ ನೇತೃತ್ವದ ತಂಡ ಉಡುಪಿಯಲ್ಲಿ ಬೀಡುಬಿಟ್ಟಿದ್ದು, ಎಸ್ಪಿ ಕಚೇರಿಗೆ ಭೇಟಿ ನೀಡಿ ಎಸ್ಪಿ ಅಕ್ಷಯ್ ಹಾಗೂ ಪ್ರಕರಣದ ಈ ಹಿಂದಿನ ತನಿಖಾಧಿಕಾರಿ ಬೆಳ್ಳಿಯಪ್ಪ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಕಾಲೇಜಿಗೆ ಭೇಟಿ ನೀಡಲಿರುವ ತಂಡ, ಸಂತ್ರಸ್ತೆ ಹಾಗೂ ಆರೋಪಿ ವಿದ್ಯಾರ್ಥಿನಿಯರನ್ನು ಮತ್ತು ಆಡಳಿತ ಮಂಡಳಿಯನ್ನು ವಿಚಾರಣೆ ನಡೆಸಲಿದೆ.

ಇದಲ್ಲದೆ ಸಿಐಡಿ ಎಸ್ಪಿ ಕೂಡ ಉಡುಪಿಗೆ ಭೇಟಿ ನೀಡಲಿದ್ದಾರೆ ಎನ್ನಲಾಗಿದೆ.

ಟಾಪ್ ನ್ಯೂಸ್