ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ವರ್ಗಾವಣೆ:ವಿದ್ಯಾಕುಮಾರಿ ನೂತನ ಡಿಸಿ

ಉಡುಪಿ: ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ. ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿ ಕೆ.ಅವರನ್ನು ನೇಮಕ ಮಾಡಲಾಗಿದೆ.

ಮೂಲತಃ ಉಳ್ಳಾಲ ತಾಲೂಕಿನ ಪಾವೂರು ಗ್ರಾಮದವರಾಗಿರುವ ವಿದ್ಯಾಕುಮಾರಿಯವರನ್ನು ತಕ್ಷಣದಿಂದ ಜಾರಿಯಾಗುವಂತೆ ಉಡುಪಿ ಜಿಲ್ಲಾಧಿಕಾರಿಯಾಗಿ ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ.

ಕೆಎಎಸ್ ನಿಂದ ಐಎಎಸ್ ಗೆ 5 ವರ್ಷಗಳ ಹಿಂದೆ ಭಡ್ತಿ ಪಡೆದಿದ್ದ ವಿದ್ಯಾಕುಮಾರಿಯವರು ಉಡುಪಿಯಲ್ಲಿ ಈ ಹಿಂದೆ ಎರಡು ವರ್ಷಗಳ ಕಾಲ ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.

ಟಾಪ್ ನ್ಯೂಸ್