ಉಳ್ಳಾಲ; ಆತ್ಮಹತ್ಯೆಗೆ ಯತ್ನಿಸಿದ್ದ ಜೋಡಿ ಚಿಕಿತ್ಸೆ ಫಲಿಸದೆ ಮೃತ್ಯು, ಬಂಟ್ವಾಳದ ನಿವಾಸಿ ಯುವಕ ನಿಯಾನ್ & ಸಫ್ರೀನಾ ಮೃತ್ಯು

-ನಿಯಾನ್ (19), ಸಫ್ರೀನಾ(22) ಆತ್ಮಹತ್ಯೆ ಮಾಡಿಕೊಂಡವರು

ಉಳ್ಳಾಲ:ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಜೋಡಿ ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಬಂಟ್ವಾಳ ಮೂಲದ ನಿಯಾನ್ (19) ಮತ್ತು ಕಂಕನಾಡಿ ನಿವಾಸಿ ಸಫ್ರೀನಾ(22) ಮೃತಪಟ್ಟವರು. ಮೇ.7 ರಂದು ಪಂಪ್ ವೆಲ್ ಸಮೀಪ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಇಬ್ಬರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಸಫ್ರೀನಾ ಆಸ್ಪತ್ರೆಯಲ್ಲಿ ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದರೆ, ನಿಯಾನ್ ಸಂಜೆ ವೇಳೆ ಮೃತಪಟ್ಟಿದ್ದಾನೆ.ಇವರಿಬ್ಬರು ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ.ಆತ್ಮಹತ್ಯೆಗೆ ಕಾರಣವತಿಳಿದು ಬಂದಿಲ್ಲ.

ಈ ಕುರಿತು ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಚ್ಚಿಲ;ಮಗುವಿನ ಮೇಲೆ ಬೀದಿ ನಾಯಿ ದಾಳಿ

ಉಚ್ಚಿಲ;ಬೀದಿ ನಾಯಿ ದಾಳಿಗೆ ಮಗುವೊಂದು ತೀವ್ರವಾಗಿ ಗಾಯಗೊಂಡ ಘಟನೆ ನಿನ್ಮೆ ಸಂಜೆ ಉಚ್ಚಿಲದ ಪೊಲ್ಯ ಎಂಬಲ್ಲಿ ನಡೆದಿದೆ.

ಗಾಯಾಳು ಮಗುವನ್ನು ಅಜ್ಜರ ಕಾಡು ಆಸ್ಪತ್ರೆಗೆ ದಾಖಲಿಸಲಾಗಿದೆ.ಪೊಲ್ಯ ಪರಿಸರದಲ್ಲಿ ಬೀದಿ ನಾಯಿಗಳ‌ ಕಾಟ ಹೆಚ್ಚಿದ್ದು ಹಲವರಿಗೆ ಕಚ್ಚಿರುವುದಾಗಿ ಗ್ರಾಮಸ್ಥರು ದೂರಿದ್ದಾರೆ.

ಇದರಿಂದ ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದು, ಕೂಡಲೇ ಬೀದಿನಾಯಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

ಪ್ರವೀಣ್ ನೆಟ್ಟಾರು ಪತ್ನಿಗೆ ತೋರಿದ ಮಾನವೀಯತೆ ಫಾಝಿಲ್ & ಮಸೂದ್ ಕುಟುಂಬಕ್ಕೆ ತೋರಿಸುತ್ತಾರ ಸಿದ್ದರಾಮಯ್ಯ?ಬಿಜೆಪಿ ಅವಧಿಯಲ್ಲಿ ಹತ್ಯೆಯಾದ ಯುವಕರಿಬ್ಬರ ಕುಟುಂಬಕ್ಕೆ ಪರಿಹಾರ ಕೊಡಿಸುವಲ್ಲಿ‌ ಕಾಂಗ್ರೆಸ್ಸಿಗರು ಮೌನ?

BIG NEWS ತೀವ್ರಗೊಂಡ ಮಹಿಳಾ ಕುಸ್ತಿಪಟುಗಳ ಪ್ರತಿಭಟನೆ, ನೂತನ ಸಂಸತ್ ಭವನಕ್ಕೆ ಮೆರವಣಿಗೆ ತೆರಳಲು ಯತ್ನ; ಸಾಕ್ಷಿ ಮಲಿಕ್, ವಿನೇಶ್ ಪೋಗಟ್ ಸೇರಿ ಹಲವರು ವಶಕ್ಕೆ

ನವದೆಹಲಿ;ನೂತನ ಸಂಸತ್​ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲು ಯತ್ನಿಸುತ್ತಿದ್ದ ಕುಸ್ತಿಪಟುಗಳನ್ನು ಪೊಲೀಸರು ಬಂಧಿಸಿದ್ದಾರೆ.

Developed by eAppsi.com