ಉಳ್ಳಾಲ; ಯುವತಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ

ಉಳ್ಳಾಲ:ಯುವತಿಯೋರ್ವಳು ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಪಜೀರು ಗ್ರಾಮದ ಅಡಪ್ಪ ರೆಸಿಡೆನ್ಸಿಯಲ್ಲಿ ನಡೆದಿದೆ.

ಪ್ರೀತಿಕಾ ಪೂಜಾರಿ(21)ಆತ್ಮ ಹತ್ಯೆಗೈದ ಯುವತಿ.

ಪ್ರೀತಿಕ ತನ್ನ ತಾಯಿ ಮತ್ತು ಅಣ್ಣನೊಂದಿಗೆ ಪಜೀರು ಗ್ರಾಮದ ಅಡಪ್ಪ ರೆಸಿಡೆನ್ಸಿಯ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಮಂಗಳೂರಿನ ಕಾಲ್ ಸೆಂಟರ್ ಒಂದರಲ್ಲಿ ಪ್ರೀತಿಕಾ ಉದ್ಯೋಗದಲ್ಲಿದ್ದರು.

ಇಂದು ಮದ್ಯಾಹ್ನ 12.30 ರ ವೇಳೆಗೆ ಪ್ರೀತಿಕಾ ಮನೆಯೊಳಗೆ ಆತ್ಮಹತ್ಯೆಗೈದಿರುವ ವಿಚಾರ ಬೆಳಕಿಗೆ ಬಂದಿದೆ

ಕೊಣಾಜೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಟಾಪ್ ನ್ಯೂಸ್