ಉಳ್ಳಾಲ; ಯುವಕನಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿರುವ ಘಟನೆ ಮಂಗಳೂರಿನ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೆಪುರ ಎಂಬಲ್ಲಿ ನಿನ್ನೆ ತಡರಾತ್ರಿ ನಡೆದಿದೆ.
ಕೋಟೆಪುರ ನಿವಾಸಿ ಸದಕತ್ತುಲ್ಲಾ (34) ಮೇಲೆ ಚೂರಿಯಿಂದ ಇರಿಯಲಾಗಿದೆ.ತಕ್ಷಣ ಅವರನ್ನು
ಇಂಡಿಯಾನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದಕತ್ತುಲ್ಲಾ ಮನೆಯಲ್ಲಿದ್ದ ಸಂದರ್ಭ ಎದುರುಗಡೆ ಕರೆಸಿ ಚೂರಿಯಿಂದ ಹೊಟ್ಟೆ ಭಾಗಕ್ಕೆ ಇರಿಯಲಾಗಿದೆ ಎನ್ನಲಾಗಿದೆ. ತಕ್ಷಣ ಮನೆಮಂದಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಹಳೆ ವೈಷಮ್ಯದಿಂದ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದೆ.
ಇಬ್ಬರು ಆರೋಪಿಗಳಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.