ಬಂಟ್ವಾಳ: ವರದಕ್ಷಿಣೆ ಕಿರುಕುಳ ಆರೋಪ; ನವವಿವಾಹಿತೆ ಆತ್ಮಹತ್ಯೆ

ಬಂಟ್ವಾಳ: ವರದಕ್ಷಿಣೆ ಕಿರುಕುಳ ತಾಳಲಾರದೆ ನವ ವಿವಾಹಿತೆಯೋರ್ವಳು ತಾಯಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ.

ಸಜೀಪ ಮೂಡ ಗ್ರಾಮದ ಸುಭಾಷ್ ನಗರದ ನಿವಾಸಿ ನೌಸೀನ್ (22) ಆತ್ಮಹತ್ಯೆ ಮಾಡಿಕೊಂಡ ಯುವತಿ.

ನೌಸೀನ್ ಅವರು ಉಳ್ಳಾಲದ ಆಜ್ಮಾನ್ ಜೊತೆ ಮೂರು ತಿಂಗಳ ಹಿಂದೆ ಪ್ರೇಮ ವಿವಾಹವಾಗಿದ್ದರು.

ನೌಸೀನ್ ಗೆ ಪತಿ ಮತ್ತು ಮನೆಯವರು ವರದಕ್ಷಿಣೆ ತರುವಂತೆ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದರು ಎಂದು ಹೇಳಲಾಗಿದೆ.

ನೌಸೀನ ಆ.25 ರಂದು ಮನೆಯಲ್ಲಿ ಯಾರು ಇಲ್ಲದ ವೇಳೆ ಕೋಣೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಸಹೋದರ ನಾಸೀರ್‌ ಆರೋಪಿಸಿದ್ದಾರೆ.

ಈ ಸಾವಿನ ಬಗ್ಗೆ ಸೂಕ್ತವಾದ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ನಾಸೀರ್ ಪೋಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಅಜ್ಮಾನ ಮದುವೆಯಾದ ಕೆಲವೇ ದಿನಗಳಲ್ಲಿ ನೌಸೀನ್ ಳ ಒಡವೆಗಳನ್ನು ಮಾರಿದ್ದಾನೆ. ಜೊತೆಗೆ ಇನ್ನಷ್ಟು ಒಡೆವೆಗಳನ್ನು ತರುವಂತೆ ಪೀಡಿಸುತ್ತಿದ್ದ ಎಂದು ಆರೋಪಿಸಲಾಗಿದೆ.

ಮನೆಯವರ ಕಿರುಕುಳ ತಾಳಲಾರದೆ ನೌಸೀನ್ ಅ.24 ರಂದು ತಾಯಿ ಮನೆಗೆ ಬಂದಿದ್ದರು. ಮರುದಿನ ಮನೆಯವರು ಕೆಲಸಕ್ಕೆ ಹೋದ ಸಂದರ್ಭದಲ್ಲಿ ಇವರು ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಟಾಪ್ ನ್ಯೂಸ್