ಮಂಗಳೂರು; ಅಪಘಾತದಲ್ಲಿ ಯುವಕ ಮೃತ್ಯು

ಉಳ್ಳಾಲ:ಸ್ಕೂಟರ್ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ನೇತ್ರಾವತಿ ಸೇತುವೆಯಲ್ಲಿ ಇಂದು ಮುಂಜಾನೆ ನಡೆದಿದೆ.

ಮೃತ ಸವಾರನನ್ನು ಮೂಲತಃ ಉಳ್ಳಾಲದ ಪ್ರಸ್ತುತ ಕೋಟೆಕಾರ್‌ನಲ್ಲಿ ವಾಸವಿದ್ದ ಅಝ್‌ವೀನ್(21)ಎಂದು ಗುರುತಿಸಲಾಗಿದೆ.

ಮೀನುಗಾರಿಕೆಯ ಕೆಲಸಕ್ಕೆಂದು ತೆರಳುತ್ತಿದ್ದ ಅಝ್‌ವೀನ್ 3:30ರ ವೇಳೆಗೆ ತೊಕ್ಕೊಟ್ಟಿನಿಂದ ಮಂಗಳೂರು ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ ನಿಯಂತ್ರಣ ಕಳೆದುಕೊಂಡು ಮುಂಭಾಗದ ಮೀನು ಸಾಗಾಟದ ವಾಹನಕ್ಕೆ ಬೈಕ್ ಢಿಕ್ಕಿ ಹೊಡೆದಿದೆ.

ಘಟನೆಯಲ್ಲಿ ಗಂಭೀರವಾಗಿದ್ದ ಅಝ್ವೀನ್ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಟಾಪ್ ನ್ಯೂಸ್