ಉಳ್ಳಾಲ:ಉಳ್ಳಾಲ ದರ್ಗಾ ಆಡಳಿತ ಮಂಡಳಿಗೆ ನಡೆದ ಚುನಾವಣೆ ಕಾನೂನು ಬಾಹಿರ ಎಂದು ನಿನ್ನೆಯಷ್ಠೇ ದರ್ಗಾದ ಮಾಜಿ ಅಧ್ಯಕ್ಷ ರಶೀದ್ ಹಾಜಿ ಹೇಳಿದ್ದರು.
ಈ ಕುರಿತು ಇಂದು ಉಳ್ಳಾಲ ಶಾಸಕ ಯು.ಟಿ.ಖಾದರ್ ಪ್ರತಿಕ್ರಿಯಿಸಿದ್ದಾರೆ. ದರ್ಗಾದ ಚುನಾವಣೆಯಲ್ಲಿ ಹಸ್ತಕ್ಷೇಪ ಮಾಡಿಲ್ಲ. ಹಸ್ತಕ್ಷೇಪ ಮಾಡಿರುವ ಬಗ್ಗೆ ಪುರಾವೆ ಒದಗಿಸಿದರೆ ತಾನು ರಾಜಕೀಯ ನಿವೃತ್ತಿ ಹೊಂದುವುದಾಗಿ ಹೇಳಿದ್ದಾರೆ.
ಸಮಸ್ತ ಅಧ್ಯಕ್ಷ ಜಿಫ್ರಿ ಮುತ್ತುಕೋಯ ತಂಙಳ್ ಅವರ ಬಗ್ಗೆ ನನಗೆ ಅಪಾರ ಗೌರವವಿದೆ. ನಾನು ರಾಜಕೀಯ ಜೀವನದಲ್ಲಿ ಯಾವತ್ತೂ ಅಧಿಕಾರ ದುರುಪಯೋಗಪಡಿಸಿಲ್ಲ.ಎಲ್ಲರನ್ನೂ ಸಮಾನವಾಗಿ ಕಂಡಿದ್ದೇನೆ ಮತ್ತು ಎಲ್ಲರನ್ನೂ ಒಗ್ಗೂಡಿಸಲು ಪ್ರಯತ್ನಿಸಿದ್ದೇನೆ.ಆದರೆ ನನ್ನ ಯಶಸ್ಸನ್ನು ಸಹಿಸದ ಕೆಲವರು ಸಮಸ್ತದ ಅಧ್ಯಕ್ಷರಿಗೆ ತಪ್ಪು ಮಾಹಿತಿ ನೀಡಿರಬೇಕು. ಶೀಘ್ರವಾಗಿ ನಾನು ಸಮಸ್ತ ಅಧ್ಯಕ್ಷ ಜಿಫ್ರಿ ಮುತ್ತುಕೋಯ ತಂಙಳ್ ಅವರನ್ನು ಭೇಟಿ ಮಾಡಿ ವಾಸ್ತವ ವಿಚಾರ ಮನವರಿಕೆ ಮಾಡಿಕೊಡುವೆ ಎಂದು ಶಾಸಕ ಯುಟಿ ಕಾದರ್ ಮಾದ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.