ಉಳ್ಳಾಲ:ಮಂಗಳೂರು ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಅಲ್ತಾಫ್ ಕುಂಪಲ ನಾಮಪತ್ರ ಹಿಂಪಡೆದ ವಿಚಾರಕ್ಕೆ ಸಂಬಂಧಿಸಿ ಬೆದರಿಕೆ ಆರೋಪದ ಹಿನ್ನೆಲೆ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ.
ಉಳ್ಳಾಲ ಪುರಸಭೆಯ ಕಾಂಗ್ರೆಸ್ ಬೆಂಬಲಿತ ಮಾಜಿ ಕೌನ್ಸಿಲರುಗಳಾದ ಮುಸ್ತಾಫ, ಉಸ್ಮಾನ್ ಕಲ್ಲಾಪು, ರಿಯಾಝ್ ಸೇರಿದಂತೆ ಇತರರ ವಿರುದ್ಧ ಪ್ರಕರಣ ದಾಖಲಾಗಿದೆ.
ಮಂಗಳೂರು ವಿಧಾನಸಭಾ ಕ್ಷೇತ್ರದಿಂದ ಎ.21ರಂದು ಜೆಡಿಎಸ್ ಅಧಿಕೃತ ಅಭ್ಯರ್ಥಿಯಾಗಿ ಅಲ್ತಾಫ್ ಕುಂಪಲ ನಾಮಪತ್ರ ಸಲ್ಲಿಸಿದ್ದರು.ಇದಾದ ಬಳಿಕ ಯಾರಿಗೂ ಮಾಹಿತಿ ನೀಡದೆ ಅಲ್ತಾಪ್ ನಾಮಪತ್ರ ಹಿಂಪಡೆದು ಪೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದರು.
ಆ ಬಳಿಕದ ಬೆಳವಣಿಗೆಯಲ್ಲಿ ಪತ್ರಿಕಾಗೋಷ್ಟಿ ನಡೆಸಿ ಅಲ್ತಾಫ್ ಅವರು ತನಗೆ ಬೆದರಿಕೆ ಹಾಕಿದ ಬಗ್ಗೆ ಹೇಳಿದ್ದರು. ಮುಸ್ತಾಫ, ಉಸ್ಮಾನ್, ರಿಯಾಝ್ ಹಾಗೂ ಇತರರು ಸೇರಿ ಬೆದರಿಕೆ ಹಾಕಿ ನಾಮಪತ್ರ ಹಿಂತೆಗೆದುಕೊಳ್ಳುವಂತೆ ಬೆದರಿಕೆ ಒಡ್ಡಿದ್ದರು ಎಂದು ಆರೋಪಿಸಲಾಗಿತ್ತು.