ಉಳ್ಳಾಲ ಜೆಡಿಎಸ್ ಅಭ್ಯರ್ಥಿ ಸದ್ದಿಲ್ಲದೆ ನಾಮಪತ್ರ ಹಿಂತೆಗೆತ ಪ್ರಕರಣಕ್ಕೆ ಸ್ಪೋಟಕ ಟ್ವಿಸ್ಟ್…

ಮಂಗಳೂರು;ಉಳ್ಳಾಲ ಜೆಡಿಎಸ್ ಅಭ್ಯರ್ಥಿ ಸದ್ದಿಲ್ಲದೆ ನಾಮಪತ್ರ ಹಿಂತೆಗೆತ ಪ್ರಕರಣ ಟ್ವಿಸ್ಟ್ ಪಡೆದುಕೊಂಡಿದೆ. ಮಂಗಳೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಜೆಡಿಎಸ್ ಪಕ್ಷದಿಂದ ಕಣಕ್ಕಿಳಿಸಿದ್ದ ನನ್ನನ್ನು ಕಾಂಗ್ರೆಸ್ ಪಕ್ಷದ ತಂಡವೊಂದು ಅಪಹರಿಸಿ ಕರೆದೊಯ್ದು ಬಲವಂತವಾಗಿ ನಾಮಪತ್ರ ಹಿಂತೆಗೆಯುವಂತೆ ಮಾಡಿದ್ದಾರೆ ಎಂದು ಮಂಗಳೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿದ್ದ ಅಲ್ತಾಫ್ ಕುಂಪಲ ಆರೋಪಿಸಿದ್ದಾರೆ.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಎಲ್ಲೂ ಓಡಿಹೋಗಿಲ್ಲ, ನನ್ನನ್ನು ಅಪಹರಿಸಿ ಬೆದರಿಸಿ ನನ್ನಿಂದ ನಾಮಪತ್ರ ಹಿಂದೆ ಪಡೆಯುವಂತೆ ಮಾಡಲಾಗಿದೆ. ನನಗೆ ಯಾವುದೇ ರೀತಿಯಲ್ಲಿ ಆಮಿಷ ಒಡ್ಡಲಾಗಿಲ್ಲ. ಈ ಕುರಿತು ಪೊಲೀಸ್ ಕಮಿಷನರ್ ಅವರಿಗೆ ಭದ್ರತೆ ನೀಡುವಂತೆ ಮನವಿ ಮಾಡಲಾಗಿದೆ ಎಂದರು.

ಮಂಗಳೂರು ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್‌ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಎಸ್‌ಎಸ್‌ಎಫ್‌ ಮುಖಂಡ ಅಲ್ತಾಫ್‌ ಕುಂಪಲ ಪಕ್ಷದ ನಾಯಕರಿಗೆ ಮಾಹಿತಿ ನೀಡದೆ ನಾಮಪತ್ರ ಹಿಂಪಡೆದಿದ್ದರು.ಜೆಡಿಎಸ್ ನಾಯಕರ ಪ್ರಕಾರ, ಅಲ್ತಾಫ್‌ ಅವರು ತಮ್ಮ ಮೊಬೈಲ್ ಫೋನನ್ನು ಸಹ ಸ್ವಿಚ್ ಆಫ್ ಮಾಡಿದ್ದರು, ಅವರ ನಿರ್ಧಾರ ಪಕ್ಷದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.

ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ರಾಜ್ಯ ವಕ್ತಾರ‌ ಎಂ.ಬಿ. ಸದಾಶಿವ, ಪಕ್ಷದ ಪ್ರಮುಖರಾದ ನಜೀರ್ ಉಳ್ಳಾಲ್, ವಸಂತ ಪೂಜಾರಿ, ಅಶ್ರಫ್ ಸಾಜೀದ್, ಅಶ್ರಫ್ ಖಾಯಿ, ಯುವ ಜನತಾದಳದ ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ ಇದ್ದರು.

ಎಪ್ರಿಲ್ 22 ರಂದು ಅವರು ನಾಮಪತ್ರ ಹಿಂತೆಗೆದುಕೊಂಡ ಬಗ್ಗೆ ಸ್ಥಳೀಯರು ಜೆಡಿಎಸ್ ಮುಖಂಡರಿಗೆ ತಿಳಿಸಿದ್ದಾರೆ. ಕುಂಪಲ ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದರೂ, ಅವರ ಫೋನ್ ಎರಡು ದಿನಗಳ ಕಾಲ ಸ್ವಿಚ್ ಆಫ್ ಆಗಿದೆ.ಈ ಹಿಂದೆ ಎಸ್‌ಎಸ್‌ಎಫ್‌ನಲ್ಲಿ ಸಕ್ರಿಯರಾಗಿದ್ದ ಕುಂಪಲ ಅವರು ಜೆಡಿಎಸ್‌ಗೆ ಸೇರಿ ಕಣದಿಂದ ಹಿಂದೆ ಸರಿದಿರುವುದು ಹಲವರನ್ನು ಅಚ್ಚರಿಗೊಳಿಸಿತ್ತು.

ಟಾಪ್ ನ್ಯೂಸ್

ಪ್ರವೀಣ್ ನೆಟ್ಟಾರು ಪತ್ನಿಗೆ ತೋರಿದ ಮಾನವೀಯತೆ ಫಾಝಿಲ್ & ಮಸೂದ್ ಕುಟುಂಬಕ್ಕೆ ತೋರಿಸುತ್ತಾರ ಸಿದ್ದರಾಮಯ್ಯ?ಬಿಜೆಪಿ ಅವಧಿಯಲ್ಲಿ ಹತ್ಯೆಯಾದ ಯುವಕರಿಬ್ಬರ ಕುಟುಂಬಕ್ಕೆ ಪರಿಹಾರ ಕೊಡಿಸುವಲ್ಲಿ‌ ಕಾಂಗ್ರೆಸ್ಸಿಗರು ಮೌನ?

BIG NEWS ತೀವ್ರಗೊಂಡ ಮಹಿಳಾ ಕುಸ್ತಿಪಟುಗಳ ಪ್ರತಿಭಟನೆ, ನೂತನ ಸಂಸತ್ ಭವನಕ್ಕೆ ಮೆರವಣಿಗೆ ತೆರಳಲು ಯತ್ನ; ಸಾಕ್ಷಿ ಮಲಿಕ್, ವಿನೇಶ್ ಪೋಗಟ್ ಸೇರಿ ಹಲವರು ವಶಕ್ಕೆ

ನವದೆಹಲಿ;ನೂತನ ಸಂಸತ್​ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲು ಯತ್ನಿಸುತ್ತಿದ್ದ ಕುಸ್ತಿಪಟುಗಳನ್ನು ಪೊಲೀಸರು ಬಂಧಿಸಿದ್ದಾರೆ.

Developed by eAppsi.com