ಉಳ್ಳಾಲ:ಮೋರಿ ದಾಟುವ ಸಂದರ್ಭ ವ್ಯಕ್ತಿಯೋರ್ವರು ಆಯ ತಪ್ಪಿ ಮೋರಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಉಳ್ಳಾಲ ತಾಲೂಕಿನ ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ಎಂಬಲ್ಲಿ ನಡೆದಿದೆ.
ಪಿಲಾರು ಪಂಜಂದಾಯ ದೈವಸ್ಥಾನದ ಬಳಿಯ ಬಾಡಿಗೆ ಮನೆ ನಿವಾಸಿ ಸುರೇಶ್ ಗಟ್ಟಿ(52)ಮೃತರು.
ಸುರೇಶ್ ಗಟ್ಟಿ ಅವರು ವೃತ್ತಿಯಲ್ಲಿ ಪೈಂಟರ್ ಆಗಿದ್ದು ಕೆಲಸ ಮುಗಿಸಿ ಮನೆಗೆ ಬರುವಾಗ ಮೋರಿ ದಾಟುತ್ತಿದ್ದ ವೇಳೆ ಕಾಲು ಜಾರಿ ಮೋರಿಗೆ ಬಿದ್ದು ಧಾರಾಕಾರ ಸುರಿಯುತ್ತಿದ್ದ ಮಳೆ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಮೋರಿಯಲ್ಲಿ ಬಿದ್ದಿದ್ದ ಸುರೇಶ್ ಅವರನ್ನು ಸ್ಥಳೀಯರು ಮೇಲಕ್ಕೆತ್ತಿ ಆಸ್ಪತ್ರೆ ಸಾಗಿಸುವಾಗಲೇ ಸುರೇಶ್ ಅವರು ಮೃತ ಪಟ್ಟಿದ್ದಾರೆ.
ಇನ್ನು ಕರಾವಳಿಯಲ್ಲಿ ಕಳೆದೆರಡು ದಿನಗಳಿಂದ ದಾರಾಕಾರ ಮಳೆ ಸುರಿಯುತ್ತಿದ್ದು ಜಿಲ್ಲಾಡಳಿತ ರೆಡ್ ಅಲರ್ಟ್ ಘೋಷಣೆ ಮಾಡಿದೆ.