ಉಳ್ಳಾಲ: ಉಳ್ಳಾಲ ನೇತ್ರಾವತಿ ಸೇತುವೆ ಮೇಲೆ ಕಾರು ನಿಲ್ಲಿಸಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ
ಚಿಕ್ಕಮಗಳೂರಿನ ಮುಗುಳಬಳ್ಳಿ ಗೋಕುಲ್ ಫಾರ್ಮ್ ನಿವಾಸಿ ಬಿ.ಎಸ್ ಶಂಕರಗೌಡ ಎಂಬವರ ಪುತ್ರ ಪ್ರಸನ್ನ (37) ಎಂಬವರು ಆತ್ಮಹತ್ಯೆ ಮಾಡಿಕೊಂಡವರು.
ಮಧ್ಯಾಹ್ನ ವೇಳೆ ತೊಕ್ಕೊಟ್ಟು ಕಡೆಯಿಂದ ಬಂದು ರಾ.ಹೆ.66 ರ ಬಳಿ ಕಾರು ನಿಲ್ಲಿಸಿ ತಡೆಬೇಲಿಯ ಬದಿಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪ್ರಸನ್ನ ತೊಕ್ಕೊಟ್ಟು ಸಮೀಪದ ಕಲ್ಲಾಪು ಮಾರುಕಟ್ಟೆಗೆ ಕೊತ್ತಂಬರಿ ಸೊಪ್ಪು ತರುತ್ತಿದ್ದರು ಎನ್ನಲಾಗಿದೆ. ಸೋಮವಾರ ಬೆಳಗ್ಗೆ ಕೊತ್ತಂಬರಿ ಸೊಪ್ಪು ತಂದು ಮಾರುಕಟ್ಟೆಗೆ ಹಾಕಿ ಬಳಿಕ ತನ್ನ ಕಾರು ಸೇತುವೆ ಮೇಲೆ ನಿಲ್ಲಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಘಟನೆಯನ್ನು ಪ್ರತ್ಯಕ್ಷ ಕಂಡವರು ತಕ್ಷಣ ರಕ್ಷಣೆಗೆ ಓಡಿದರೂ ಅದಾಗಲೇ ನೀರುಪಾಲಾಗಿದ್ದರು.