ಉಳ್ಳಾಲ; ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ

ಉಳ್ಳಾಲ;ಪಿಯುಸಿ ವಿದ್ಯಾರ್ಥಿನಿ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂಪಲದಲ್ಲಿ ನಡೆದಿದೆ‌.

ತಮಿಳುನಾಡು ಮೂಲದ ಸೋಮನಾಥ ಮತ್ತು ಭವ್ಯಾ ದಂಪತಿಯ ಹಿರಿಯ ಪುತ್ರಿ ಧನ್ಯಾ(17) ಮೃತ ವಿದ್ಯಾರ್ಥಿನಿ.
ಧನ್ಯಾ ರಾಮಕೃಷ್ಣ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯಾಗಿದ್ದರು.

ಧನ್ಯಾ ತಾಯಿ ಉಪ್ಪಿನಕಾಯಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದರು. ಫೆ.14ರಂದು ಮದ್ಯಾಹ್ನ ಮನೆಗೆ ಬಂದಾಗ ಕಾಲೇಜಿಗೆ ರಜೆಯಲ್ಲಿದ್ದ ಪುತ್ರಿ ಧನ್ಯಾ ಹೊರಗಡೆ ಹೋಗಿರುವುದನ್ನು ಕಂಡು ಗದರಿಸಿದ್ದಾರೆ.ಇದರಿಂದ ಮನನೊಂದು ಧನ್ಯಾ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು.
ಇದೀಗ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಟಾಪ್ ನ್ಯೂಸ್