ಉಳ್ಳಾಲ; ಮನೆಯೊಂದಕ್ಕೆ ಬಂದ 7 ಲಕ್ಷ ವಿದ್ಯುತ್ ಬಿಲ್, ಮನೆ ಮಂದಿ ಕಂಗಾಲು

ಉಳ್ಳಾಲ: ಉಳ್ಳಾಲದಲ್ಲಿ​ ಮನೆಯೊಂದಕ್ಕೆ 7 ಲಕ್ಷ ರೂಪಾಯಿ ವಿದ್ಯುತ್ ಬಿಲ್ ಬಂದಿದೆ, ವಿದ್ಯುತ್ ಬಿಲ್ ಜಾಸ್ತಿ ಬರುತ್ತಿದೆ ಎಂದು ಕೆಲವೆಡೆ ಜಟಾಪಟಿ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ಉಳ್ಳಾಲ ನಿವಾಸಿ ಸದಾಶಿವ ಆಚಾರ್ಯ ಎಂಬವರ ಮನೆಗೆ ನೀಡಲಾದ ವಿದ್ಯುತ್​ ಬಿಲ್​ ನಲ್ಲಿ 99,338 ಯೂನಿಟ್ ವಿದ್ಯುತ್​ ಖರ್ಚಾಗಿದ್ದು 7,71,072 ರೂಪಾಯಿ ಬಿಲ್ ನಮೂದಿಸಲಾಗಿದೆ.

ಈ ಮೊದಲು ಕೇವಲ 3,000 ರೂಪಾಯಿಯಷ್ಟು ಮಾಸಿಕ ವಿದ್ಯುತ್ ಬಿಲ್ ಬರುತ್ತಿತ್ತು. ಪ್ರತಿ ತಿಂಗಳು ಬಿಲ್ ಕಟ್ಟುತ್ತಿದ್ದರು. ಆದರೆ ಈ‌ ತಿಂಗಳು ಬಂದ ಬಿಲ್ಲನ್ನು ನೋಡಿ ಮನೆ ಮಂದಿಯೆಲ್ಲ ಅಚ್ಚರಿಗೊಂಡಿದ್ದಾರೆ.

ಈ ಬಗ್ಗೆ ಸಿಬ್ಬಂದಿಯಲ್ಲಿ ಕೇಳಿದ್ದಕ್ಕೆ ಕಚೇರಿಗೆ ತೆರಳಿ ವಿಚಾರಿಸುವಂತೆ ಹೇಳಿದ್ದಾರೆ.

ಮೆಸ್ಕಾಂ ಉಪವಿಭಾಗದ ಕಾರ್ಯನಿರ್ವಾಹಕ ಅಭಿಯಂತರ ದಯಾನಂದ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಏಜೆನ್ಸಿಗಳ ಮುಖಾಂತರ ಬಿಲ್ ಕಲೆಕ್ಷನ್ ಮಾಡಲಾಗುತ್ತದೆ. ಬಿಲ್ ರೀಡರ್​​ನ ಎಡವಟ್ಟಿನಿಂದಾಗಿ ತಪ್ಪಾಗಿ ವಿದ್ಯುತ್ ಬಿಲ್ ಮುದ್ರಣವಾಗಿದೆ. ತಕ್ಷಣವೇ ಸದಾಶಿವ ಆಚಾರ್ಯ ಅವರ ಮನೆಗೆ ಪರಿಷ್ಕೃತ ಬಿಲ್ ನೀಡಲು ವ್ಯವಸ್ಥೆ ಮಾಡಿದ್ದಾರೆ.ಅದರಂತೆ ಅವರಿಗೆ 2,833 ರೂಪಾಯಿಗಳ ಪರಿಷ್ಕೃತ ವಿದ್ಯುತ್​ ಬಿಲ್ ನ್ನು ನೀಡಲಾಗಿದೆ.

ಟಾಪ್ ನ್ಯೂಸ್

ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಮೀಲಾದ್ ರ್ಯಾಲಿಯಲ್ಲಿ ತೆರಳುತ್ತಿದ್ದ ಯುವಕರು

ಕಾಪು;ಮೀಲಾದ್ ರ್ಯಾಲಿಯಲ್ಲಿ ಸಾಗುತ್ತಿದ್ದ ಯುವಕರ ಗುಂಪು ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ