ಉಳ್ಳಾಲ; ಸ್ಕೂಟರ್ ನಿಂದ ಬಿದ್ದು ಮಹಿಳೆ ಮೃತ್ಯು

ಉಳ್ಳಾಲ: ಸ್ಕೂಟರ್ ನಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಕೆರೆಬೈಲು ಬಳಿ ನಡೆದಿದೆ.

ಮೃತರನ್ನು ಕಾಸರಗೋಡು ಮಧೂರು ನಿವಾಸಿ ಸುಮಾ ನಾರಾಯಣ ಗ( 52)ಗುರುತಿಸಲಾಗಿದೆ.

ಮೂಲತ:ಬಂಟ್ವಾಳ ನೆಟ್ಲದವರಾಗಿದ್ದ ಇವರು ಭಾನುವಾರ ಮಧೂರಿನಿಂದ ಕುಟುಂಬದ ಮನೆ ಪಿಲಾರು ಅರಮನೆಯಲ್ಲಿ ನಡೆದ ಪೂಜೆಯಲ್ಲಿ ಪಾಲ್ಗೊಂಡಿದ್ದರು. ಸಂಜೆ ಕಾಸರಗೋಡು ಕಡೆ ತೆರಳಲು ಸಹೋದರನ ಸ್ಕೂಟರ್ ನಲ್ಲಿ ತೊಕ್ಕೊಟ್ಟು ಜಂಕ್ಷನ್ ಗೆ ತೆರಳಿದವರು,ಜಪ್ಪಿನ ಮೊಗರು ಬಳಿಯ ಸಂಬಂಧಿಕರ ಮನೆಗೆ ತೆರಳಿ ವಾಪಾಸ್ ತೊಕ್ಕೊಟ್ಟು ಕಡೆ ಬರುವಾಗ ತೊಕ್ಕೊಟ್ಟು ಪ್ಲೈಓವರ್ ಸಂಪರ್ಕಿಸುವ ಕೆರೆಬೈಲು ನಾಗನ ಕಟ್ಟೆ ಬಳಿ ಚಲಿಸುತ್ತಿದ್ದ ಸ್ಕೂಟರ್ ನಿಂದ ಸುಮಾ ಉರುಳಿ ಬಿದ್ದಿದ್ದಾರೆ.

ತಲೆಗೆ ಗಂಭೀರ ಗಾಯಗೊಂಡಿದ್ದ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಅಲ್ಲಿಂದ ದೇರಳಕಟ್ಟೆ ಆಸ್ಪತ್ರೆಗೆ ದಾಖಲಿಸಲಾಗಿದೆ.ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಟಾಪ್ ನ್ಯೂಸ್

ಅಮೆರಿಕಾದಲ್ಲಿ ಭಾರತೀಯ ವಿದ್ಯಾರ್ಥಿಗೆ ಕೂಡಿ ಹಾಕಿ ಚಿತ್ರಹಿಂಸೆ; ವಿಧ್ಯಾಭ್ಯಾಸಕ್ಕೆಂದು ಕರೆದುಕೊಂಡು ಹೋಗಿ ಮನೆಗೆಲಸ ಮಾಡುವಂತೆ ಬಲವಂತ!

7 ತಿಂಗಳುಗಳಿಂದ ಬಾತ್ರೂಮ್​ನಲ್ಲಿ ಬಂಧಿಯಾಗಿದ್ದ 20 ವರ್ಷದ ಭಾರತೀಯ ವಿದ್ಯಾರ್ಥಿಯನ್ನು ಅಮೆರಿಕಾದ ಅಧಿಕಾರಿಗಳು