BREAKING ಉಳ್ಳಾಲ; ಯುವಕ ನಾಪತ್ತೆ, ಸಮುದ್ರದ ಬಳಿ ಚಪ್ಪಲಿ, ಕಾರು ಪತ್ತೆ

ಉಳ್ಳಾಲ: ಸೋಮೇಶ್ವರ ಸಮುದ್ರ ತೀರದ ರುದ್ರಪಾದೆಯಲ್ಲಿ ಉಳ್ಳಾಲದ ಧರ್ಮನಗರ ನಿವಾಸಿ ಯುವಕ ನಾಪತ್ತೆಯಾಗಿದ್ದು, ಸ್ಥಳೀಯರು ಹುಡುಕಾಟ ನಡೆಸುತ್ತಿದ್ದಾರೆ.

ಜಿನ್ನಪ್ಪ ಪೂಜಾರಿ ಎಂಬವರ ಪುತ್ರ ವಸಂತ್ ಅಮೀನ್ (49) ನಾಪತ್ತೆಯಾದವರು.ಕಾರು ಡೀಲರ್ ಆಗಿರುವ ಅಮೀನ್ ಅವರ ಚಪ್ಪಲಿ, ಮೊಬೈಲ್ ಮತ್ತು ಕಾರು ಸಮುದ್ರದ ಬಳಿ ಪತ್ತೆಯಾಗಿದೆ.ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ.

ಉಳ್ಳಾಲದ ಬಸ್ತಿಪಡ್ಪು ನಿವಾಸಿ ಆಗಿರುವ ಇವರು ಉಳ್ಳಾಲದ ಧರ್ಮನಗರದಲ್ಲಿ ಕೆಲ ತಿಂಗಳುಗಳ ಹಿಂದೆ ಮನೆಯನ್ನು ಕಟ್ಟಿದ್ದರು.

ಇಂದು ಬೆಳಿಗ್ಗೆ ಮನೆಯಿಂದ ಕೆಲಸಕ್ಕೆಂದು ಹೋದವರು ನಾಪತ್ತೆಯಾಗಿದ್ದಾರೆ. ಸ್ಥಳೀಯರು ಸೋಮೇಶ್ವರ ಸಮುದ್ರ ತೀರದಲ್ಲಿ ಕಾರು ಹಾಗೂ ರುದ್ರಪಾದೆಯಲ್ಲಿ ಪಸ್೯ ,ಚಪ್ಪಲಿ ಹಾಗೂ ಮೊಬೈಲ್ ಅನ್ನು ಪತ್ತೆಹಚ್ಚಿದ್ದಾರೆ. ಸ್ಥಳೀಯ ಈಜುಗಾರರ ಸಹಾಯದಿಂದ ಸಮುದ್ರದಲ್ಲಿ ವಸಂತ್ ಅಮೀನ್ ಅವರಿಗಾಗಿ ಹುಡುಕಾಟ ನಡೆಯುತ್ತಿದೆ.

ಟಾಪ್ ನ್ಯೂಸ್

ಹಿಂದೂ ಯುವತಿಯನ್ನು “ಕೇರಳ ಸ್ಟೋರಿ” ವೀಕ್ಷಿಸಲು ಕರೆದೊಯ್ದ ಸಂಸದೆ ಪ್ರಜ್ಞಾ ಸಿಂಗ್; ಆಕೆ ಸಿನಿಮಾ ನೋಡಿದ ಮರುದಿನವೇ ತನ್ನ ಮುಸ್ಲಿಂ ಪ್ರೇಮಿಯೊಂದಿಗೆ ಪರಾರಿ!- ವರದಿ

ಭೋಪಾಲ್‌; 19 ವರ್ಷದ ಹಿಂದೂ ಸಮುದಾಯದ ನರ್ಸಿಂಗ್ ವಿದ್ಯಾರ್ಥಿನಿ ತನ್ನ ನಿಗದಿಯಾಗಿದ್ದ ಮದುವೆಗೆ

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ; ಕರಾವಳಿ ಜಿಲ್ಲೆಗೆ ಚಂಡಮಾರುತದ ಭೀತಿ, ಬಿರುಗಾಳಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಉಡುಪಿ;ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಕರವಾಳಿ ಜಿಲ್ಲೆಗಳಿಗೆ ಚಂಡಮಾರುತದ ಭೀತಿ ಎದುರಾಗಿದೆ. ಅರಬ್ಬಿ

ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ತಡೆಗೆ “ಆ್ಯಂಟಿ ಕಮ್ಯುನಲ್‌ ವಿಂಗ್” ಸ್ಥಾಪನೆ; ಹೇಗಿರಲಿದೆ ಇದರ ರೂಪುರೇಷೆ? ಗೃಹಸಚಿವರು ಹೇಳಿದ್ದೇನು?

ಮಂಗಳೂರು:ನೈತಿಕ ಪೊಲೀಸ್ ಗಿರಿ ತಡೆಗೆ ಮಂಗಳೂರು ನಗರದಲ್ಲಿ ಆ್ಯಂಟಿ ಕಮ್ಯುನಲ್‌ ವಿಂಗ್ ಆರಂಭಿಸಲು

Developed by eAppsi.com