ಉಳ್ಳಾಲ; ಸಮುದ್ರಪಾಲಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ

ಮಂಗಳೂರು: ಸೋಮೇಶ್ವರ ಕಡಲತೀರಕ್ಕೆ ತೆರಳಿದ್ದ ಇಬ್ಬರು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಸುಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಮಂಜೇಶ್ವರದ ಕುಂಜತ್ತೂರು ಅಡ್ಕ ನಿವಾಸಿ ಯೆಶ್ವಿತ್(18), ಕುಂಜತ್ತೂರು ಮಜಲ್ ನಿವಾಸಿ ಯುವರಾಜ್(18) ಸಮುದ್ರಪಾಲಾದವರು.

ನಿನ್ನೆ ವಿದ್ಯಾರ್ಥಿಗಳು ಮುಳುಗಡೆಯಾಗಿದ್ದು ಬೆಳಗ್ಗಿನವರೆಗೂ ಸ್ಥಳೀಯ ಈಜುಗಾರರು ನಿರಂತರ ಕಾರ್ಯಾಚರಣೆಯಲ್ಲಿದ್ದರು.ಇಂದು ಬೆಳಿಗ್ಗೆ ಮೃತದೇಹ ಪತ್ತೆಯಾಗಿದೆ.

ಇಬ್ಬರು ಸಮೀಪದ ಸೋಮೇಶ್ವರ ಪರಿಜ್ಞಾನ ಪಿಯುಸಿ ಕಾಲೇಜಿನ ದ್ವಿತೀಯ ವರ್ಷ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾಗಿದ್ದಾರೆ. ಕಾಲೇಜು ಮುಗಿಸಿ ಮಧ್ಯಾಹ್ನ ಬಳಿಕ ಸಮುದ್ರ ವಿಹಾರಕ್ಕೆಂದು ತೆರಳಿದ್ದರು. ಈ ವೇಳೆ ಓರ್ವ ವಿದ್ಯಾರ್ಥಿ ಸಮುದ್ರದ ಅಲೆಗಳ ನಡುವೆ ಸಿಲುಕಿದರೆ, ಇನ್ನೋರ್ವ ವಿದ್ಯಾರ್ಥಿ ಆತನನ್ನು ಹಿಡಿಯಲು ಮುಂದಾಗುತ್ತಿದ್ದಂತೆ ಇಬ್ಬರು ಅಲೆಗಳ ನಡುವೆ ಸಿಲುಕಿ ನಾಪತ್ತೆಯಾಗಿದ್ದರು.

ಟಾಪ್ ನ್ಯೂಸ್