ಉಳ್ಳಾಲ;ರೂಪದರ್ಶಿ ಪ್ರೇಕ್ಷ ಆತ್ಮಹತ್ಯೆ ಪ್ರಚೋದನೆ ಆರೋಪ ಎದುರಿಸುತ್ತಿದ್ದ ಯುವಕ‌ ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆ!

ಉಳ್ಳಾಲ:ಕುಂಪಲದ ನಿವಾಸಿ ರೂಪದರ್ಶಿ ಪ್ರೇಕ್ಷ ಸಾವಿಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿದ್ದ ಯುವಕ ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಕುತ್ತಾರಿನಲ್ಲಿ‌ ನಡೆದಿದೆ.

ಕುತ್ತಾರು ನಿವಾಸಿ ಯತಿರಾಜ್ (20)ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆಯಾದ ಯುವಕ.

ಬೆಳಿಗ್ಗೆ ಯತಿರಾಜ್ ನ ಮಾವ ಆತ ಕಾಣದ ಹಿನ್ನಲೆ ಹುಡುಕಾಡಿದಾಗ ಆತ್ಮಹತ್ಯೆಗೈದಿರುವುದು ಬೆಳಕಿಗೆ ಬಂದಿದೆ.
ಯತಿರಾಜ್ ತನ್ನ ಮನೆಯ ಹಿಂದಿನ ಚಿಕ್ಕಮ್ಮನ ಮನೆಯಲ್ಲಿ ಹೊರಗಡೆ ಕಬ್ಬಿಣದ ಹುಕ್ಸ್ ಒಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.

ಕೂಡಲೆ ಮನೆಮಂದಿ ನೇಣು ಕುಣಿಕೆಯನ್ನ ಕಡಿದಿದ್ದಾರೆ.ಆ ವೇಳೆ ಆತ ಉಸಿರು ನಿಲ್ಲಿಸಿದ್ದ. ನಿನ್ನೆ ರಾತ್ರಿ 11 ರ ವೇಳೆ ಮನೆಗೆ ಬಂದಿದ್ದ ಯತಿರಾಜ್ ಚಿಕ್ಕಮ್ಮ ಮನೆಯಲ್ಲಿರದ ವೇಳೆ ನೇಣು ಬಿಗಿದಿದ್ದಾನೆ ಎನ್ನಲಾಗಿದೆ.

ಸ್ಥಳಕ್ಕೆ ಉಳ್ಳಾಲ ಪೊಲೀಸರು ತೆರಳಿ ಪರಿಶೀಲಿಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಎರಡು ವರುಷಗಳ ಹಿಂದೆ ಕುಂಪಲದ ಆಶ್ರಯ ಕಾಲನಿಯ ಮನೆಯಲ್ಲಿ ರೂಪದರ್ಶಿ ಪ್ರೇಕ್ಷ ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು.ಯುವತಿಯ ಸಾವಿಗೆ ಯತಿರಾಜ್ ಕಾರಣ ಎಂದು ಆಪಾದಿಸಲಾಗಿತ್ತು.

ತುಮಕೂರು; ಹಾಸಿಗೆ ಹಿಡಿದಿದ್ದ ವ್ಯಕ್ತಿ ಆಂಬುಲೆನ್ಸ್‌ನಲ್ಲಿ ಬಂದು ಮತದಾನ 

ತುಮಕೂರಿನಲ್ಲಿ ಅಪಘಾತದಿಂದ ಹಾಸಿಗೆ ಹಿಡಿದಿದ್ದ ವ್ಯಕ್ತಿಯೊಬ್ಬರು ಆಂಬುಲೆನ್ಸ್‌ನಲ್ಲಿ ಬಂದು ಮತದಾನ ಮಾಡಿದ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.

ತುಮಕೂರು ನಗರದ ಸಂಪಗಿರಾಮು ಎಂಬ ವ್ಯಕ್ತಿಯೇ ಹಾಸಿಗೆಯಲ್ಲಿದ್ದರು ಮತ ಚಲಾಯಿಸಿದ ಪ್ರಜ್ಞಾವಂತ ಮಾತದಾರ. ಸಂಪಗಿರಾಮು ಅವರಿಗೆ ಅಫಘಾತವಾಗಿ ಗಂಭೀರ ಗಾಯದ ಪರಿಣಾಮ ನಾಲ್ಕು ತಿಂಗಳಿನಿಂದ ಹಾಸಿಗೆಯಲ್ಲಿಯೇ ಇದ್ದಾರೆ. ಆದರೆ ಚುನಾವಣೆಯ ದಿನ ತಮ್ಮ ಪತ್ನಿ ಜೊತೆ ಆಂಬುಲೆನ್ಸ್‌ನಲ್ಲಿ ಬಂದು ಮತ ಚಲಾಯಿಸಿದ್ದಾರೆ.

ಸಂಪಗಿರಾಮು ತುಮಕೂರು ನಗರದ ರೈಲ್ವೇ ಸ್ಟೇಷನ್ ರಸ್ತೆಯ ಮತಗಟ್ಟೆ ಸಂಖ್ಯೆ 148ರಲ್ಲಿ ಮತದಾನ ಮಾಡಿದ್ದಾರೆ. ಹಾಸಿಗೆ ಹಿಡಿದಿದ್ದರೂ ಕೂಡ ಮತದಾನ ಮಾಡಬೇಕ್ಕೆನ್ನುವ ಅವರ ಉತ್ಸಾಹಕ್ಕೆ ಅಧಿಕಾರಿಗಳು ಬೆಂಬಲ ನೀಡಿದ್ದಾರೆ.ಚುನಾವಣಾ ಸಿಬ್ಬಂದಿ ಸಹಾಯದಿಂದ ಸಂಪಗಿರಾಮು ತಮ್ಮ ಪ್ರಜಾಸತ್ತಾತ್ಮಕ ಹಕ್ಕನ್ನು ಚಲಾಯಿಸಿದ್ದಾರೆ

ಟಾಪ್ ನ್ಯೂಸ್

ಹಿಂದೂ ಯುವತಿಯನ್ನು “ಕೇರಳ ಸ್ಟೋರಿ” ವೀಕ್ಷಿಸಲು ಕರೆದೊಯ್ದ ಸಂಸದೆ ಪ್ರಜ್ಞಾ ಸಿಂಗ್; ಆಕೆ ಸಿನಿಮಾ ನೋಡಿದ ಮರುದಿನವೇ ತನ್ನ ಮುಸ್ಲಿಂ ಪ್ರೇಮಿಯೊಂದಿಗೆ ಪರಾರಿ!- ವರದಿ

ಭೋಪಾಲ್‌; 19 ವರ್ಷದ ಹಿಂದೂ ಸಮುದಾಯದ ನರ್ಸಿಂಗ್ ವಿದ್ಯಾರ್ಥಿನಿ ತನ್ನ ನಿಗದಿಯಾಗಿದ್ದ ಮದುವೆಗೆ

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ; ಕರಾವಳಿ ಜಿಲ್ಲೆಗೆ ಚಂಡಮಾರುತದ ಭೀತಿ, ಬಿರುಗಾಳಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಉಡುಪಿ;ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಕರವಾಳಿ ಜಿಲ್ಲೆಗಳಿಗೆ ಚಂಡಮಾರುತದ ಭೀತಿ ಎದುರಾಗಿದೆ. ಅರಬ್ಬಿ

ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ತಡೆಗೆ “ಆ್ಯಂಟಿ ಕಮ್ಯುನಲ್‌ ವಿಂಗ್” ಸ್ಥಾಪನೆ; ಹೇಗಿರಲಿದೆ ಇದರ ರೂಪುರೇಷೆ? ಗೃಹಸಚಿವರು ಹೇಳಿದ್ದೇನು?

ಮಂಗಳೂರು:ನೈತಿಕ ಪೊಲೀಸ್ ಗಿರಿ ತಡೆಗೆ ಮಂಗಳೂರು ನಗರದಲ್ಲಿ ಆ್ಯಂಟಿ ಕಮ್ಯುನಲ್‌ ವಿಂಗ್ ಆರಂಭಿಸಲು

Developed by eAppsi.com