ಗಾಯಗೊಂಡು ನೆಲದ ಮೇಲೆ ಬಿದ್ದಿದ್ದ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಮಾಡಿ ವಿಕೃತಿ
ಉತ್ತರಪ್ರದೇಶ;ಗಾಯಗೊಂಡು ನೆಲದ ಮೇಲೆ ಮಲಗಿದ್ದ ವ್ಯಕ್ತಿಯ ಮೇಲೆ ಯುವಕನೊಬ್ಬ ಮೂತ್ರ ವಿಸರ್ಜನೆ ಮಾಡಿ ವಿಕೃತಿ ಮೆರೆದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.
ಗಾಯಗೊಂಡ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ಆದಿತ್ಯ ಎಂದು ಗುರುತಿಸಲಾದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸೋಮವಾರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ 30 ಸೆಕೆಂಡುಗಳ ವೀಡಿಯೊದಲ್ಲಿ, ಆರೋಪಿಯು ನೆಲದ ಮೇಲೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಗಾಯಗೊಂಡ ವ್ಯಕ್ತಿಯನ್ನು ತಲೆಗೆ ಒದೆಯುವುದು, ನಿಂದಿಸುತ್ತಿರುವುದು ಕಂಡು ಬಂದಿದೆ.
ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸಿದ್ದು, ಉಳಿದವರಿಗಾಗಿ ಶೋಧ ನಡೆಯುತ್ತಿದೆ ಎಂದು ಉಪ ಪೊಲೀಸ್ ಆಯುಕ್ತ (ನಗರ) ಸೂರಜ್ ಕುಮಾರ್ ರೈ ತಿಳಿಸಿದ್ದಾರೆ.
ಈ ಸಂಬಂಧ ಆಗ್ರಾದ ಯಾವುದೇ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತ ಯಾವುದೇ ದೂರು ದಾಖಲಿಸಿಲ್ಲ.ವೀಡಿಯೊ ಮೂರು-ನಾಲ್ಕು ತಿಂಗಳಷ್ಟು ಹಳೆಯದು ಎಂದು ಪೊಲೀಸರು ತಿಳಿಸಿದ್ದಾರೆ.