ಉತ್ತರಪ್ರದೇಶ; ಉತ್ತರ ಪ್ರದೇಶದಲ್ಲಿ ಪೊಲೀಸ್ ಮತ್ತು ಮಾಧ್ಯಮದವರ ಎದುರೇ ನಡೆದಿದ್ದ ಗುಂಡಿನ ದಾಳಿಯಲ್ಲಿ ಹತ್ಯೆಗೀಡಾದ ಗ್ಯಾಂಗ್‌ಸ್ಟರ್ ಅತೀಕ್ ಅಹ್ಮದ್ ಮತ್ತು ಅಶ್ರಫ್ ಅಹ್ಮದ್ ಅವರ ಸಹೋದರಿ ಈ ಹತ್ಯೆಯ ಬಗ್ಗೆ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.
ಈ ಬಗ್ಗೆ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಅಥವಾ ಸ್ವತಂತ್ರ ಸಂಸ್ಥೆಯ ನೇತೃತ್ವದಲ್ಲಿ ಸಮಗ್ರ ತನಿಖೆ ನಡೆಸಬೇಕೆಂದು ಸುಪ್ರೀಂಕೋರ್ಟ್‌ಗೆ ಮನವಿ ಮಾಡಿದ್ದಾರೆ.
ಅತೀಕ್ ಸಹೋದರಿ ಆಯಿಷಾ ನೂರಿ ಈ ಕುರಿತು ಮನವಿ ಸಲ್ಲಿಸಿದ್ದು, ಮನವಿಯಲ್ಲಿ, ಅತೀಕ್ ಅಹ್ಮದ್ ಹಾಗೂ ಪುತ್ರನ ಎನ್‌ಕೌಂಟರ್ ಹತ್ಯೆಯ ತನಿಖೆಯನ್ನು ನಡೆಸಬೇಕೆಂದು ಕೋರಲಾಗಿದೆ. ಉತ್ತರ ಪ್ರದೇಶ ಸರ್ಕಾರ ತನ್ನ ಕುಟುಂಬವನ್ನು ಟಾರ್ಗೆಟ್ ಮಾಡಿ ಎನ್‌ಕೌಂಟರ್ ಹತ್ಯೆಗಳು, ಬಂಧನ ಸೇರಿದಂತೆ ಸಾಕಷ್ಟು ಕಿರುಕುಳ ನೀಡಿದೆ ಎಂದು ಅವರು ಆರೋಪಿಸಿದ್ದಾರೆ.
ಈ ಪ್ರಕರಣದ ಬಗ್ಗೆ ಸ್ವತಂತ್ರ ಸಂಸ್ಥೆಯಿಂದ ಸಮಗ್ರ ತನಿಖೆ ನಡೆಸಬೇಕೆಂದು ಕೋರ್ಟ್ ಗೆ ಮನವಿ ಮಾಡಿದ್ದಾರೆ.