ಶಾಲಾ ಬಾಲಕನಿಗೆ ಥಳಿಸಿ ಮುಖದ ಮೂತ್ರ ವಿಸರ್ಜನೆ; ಅಮಾನವೀಯ ಘಟನೆ ವರದಿ

12ನೇ ತರಗತಿ ವಿದ್ಯಾರ್ಥಿಯ ಮೇಲೆ ಯುವಕರ ಗುಂಪೊಂದು ಹಲ್ಲೆ ನಡೆಸಿ ಮುಖಕ್ಕೆ ಮೂತ್ರ ವಿಸರ್ಜನೆ ಮಾಡಿದ ಆಘಾತಕಾರಿ ಘಟನೆ ಉತ್ತರಪ್ರದೇಶದ ಮೀರತ್‌ನಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಈವರೆಗೆ ಮೂವರನ್ನು ಬಂಧಿಸಲಾಗಿದೆ.

ಕೃತ್ಯದ ದೃಶ್ಯವನ್ನು ಮೊಬೈಲ್‌ನಲ್ಲಿ ಸೆರೆ ಹಿಡಿಯಲಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ವೈರಲ್‌ ಆಗಿದೆ.

ವೈರಲ್‌ ವಿಡಿಯೋವೊಂದರಲ್ಲಿ ಒಬ್ಬ ವ್ಯಕ್ತಿಯು ನಿರ್ಜನ ಸ್ಥಳದಲ್ಲಿ ವಿದ್ಯಾರ್ಥಿಯನ್ನು ಥಳಿಸುತ್ತಿರುವುದು ಕಂಡು ಬಂದಿದೆ. ವಿದ್ಯಾರ್ಥಿಯ ತಲೆ ಮತ್ತು ಬೆನ್ನಿನ ಮೇಲೆ ಆತ ಪದೇ ಪದೇ ಹಲ್ಲೆ ಮಾಡುವುದು ಕೂಡ ಸೆರೆಯಾಗಿದೆ. ಇನ್ನೊಂದು ವಿಡಿಯೋದಲ್ಲಿ ವ್ಯಕ್ತಿಯೊಬ್ಬ ವಿದ್ಯಾರ್ಥಿಯ ಮುಖದ ಮೇಲೆ ಮೂತ್ರ ವಿಸರ್ಜನೆ ಮಾಡುತ್ತಿರುವುದು ಕಂಡು ಬಂದಿದೆ.

ಘಟನೆಗೆ ಸಂಬಂಧಿಸಿ ಉತ್ತರಪ್ರದೇಶದ ಪೊಲೀಸರು 7 ಜನರ ವಿರುದ್ಧ ಪ್ರಕರಣ ದಾಖಲಿಸಿ ಮೂವರನ್ನು ಬಂಧಿಸಿದ್ದಾರೆ. ಬಂಧಿತ ನಾಲ್ವರನ್ನು ಅವಿ ಶರ್ಮಾ, ಆಶಿಶ್ ಮಲಿಕ್, ರಾಜನ್ ಮತ್ತು ಮೋಹಿತ್ ಠಾಕೂರ್ ಎಂದು ಗುರುತಿಸಲಾಗಿದೆ. ಆರೋಪಿಗಳ ವಿರುದ್ಧ ಸೆಕ್ಷನ್ 294ರಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದಲ್ಲದೆ ಆರೋಪಿಗಳ ವಿರುದ್ಧ ಗಲಭೆ, ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು, ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ ಮತ್ತು ಕ್ರಿಮಿನಲ್ ಬೆದರಿಕೆಯ ನಿಬಂಧನೆಗಳ ಅಡಿಯಲ್ಲಿ ಆರೋಪ ಹೊರಿಸಲಾಗಿದೆ.

ಈ ಕುರಿತು ಪ್ರತಿಕ್ರಿಯೆಯನ್ನು ನೀಡಿದ ಮೀರತ್‌ ಎಸ್ಪಿ ಪಿಯೂಷ್ ಸಿಂಗ್, ಬಾಲಕನ ಮೇಲೆ ಹಲ್ಲೆ ನಡೆಸಿ ಮೂತ್ರ ವಿಸರ್ಜನೆ ಮಾಡಲಾಗಿದ್ದು, ಆತನ ತಂದೆಯ ದೂರಿನ ಆಧಾರದ ಮೇಲೆ ನಾವು ದೂರು ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಿದ್ದೇವೆ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಸಂತ್ರಸ್ತನ ತಂದೆ ಈ ಬಗ್ಗೆ ಮಾತನಾಡಿದ್ದು, ಸಂಬಂಧಿಕರ ಮನೆಯಿಂದ ಹಿಂತಿರುಗುತ್ತಿದ್ದ ಮಗನನ್ನು ತಂಡವು ಅಪಹರಿಸಿ ಸಮೀಪದ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಹಲ್ಲೆ ನಡೆಸಿದ್ದಾರೆ. ಮಗ ಹಿಂತಿರುಗದ ಕಾರಣ ರಾತ್ರಿಯಿಡೀ ಆತನಿಗಾಗಿ ಹುಡುಕಾಟ ನಡೆಸಿದ್ದೇವೆ. ಆತ ರಾತ್ರಿ ಸಿಕ್ಕಿರಲಿಲ್ಲ. ಮರುದಿನ ಬೆಳಿಗ್ಗೆ ಅವರು ಮನೆಗೆ ಬಂದು ನಡೆದ ಘಟನೆಯನ್ನು ವಿವರಿಸಿದ್ದಾನೆ. ಈ ಬಗ್ಗೆ ನಾವು ಪೊಲೀಸರಿಗೆ ದೂರು ನೀಡಲು ಮುಂದಾಗಿದ್ದೆವು ಆದರೆ ಆರಂಭದಲ್ಲಿ ಯಾವುದೇ ಕ್ರಮ ಕೈಗೊಂಡಿಲ್ಲ. ನ.16ರಂದು ಮತ್ತೆ ಹೋಗಿದ್ದು, ಅಂದು ಪ್ರಕರಣ ದಾಖಲಾಗಿತ್ತು ಆದರೆ ಆರೋಪಿಗಳ ವಿರುದ್ಧ ಸಣ್ಣ ಸೆಕ್ಸನ್‌ಗಳಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಟಾಪ್ ನ್ಯೂಸ್