ಉತ್ತರ ಪ್ರದೇಶ; ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಇಬ್ಬರು ಸಜೀವ ದಹನ; ಪೊಲೀಸರ ಮೇಲೆ ಕುಟುಂಬದ ಆರೋಪ

ಉತ್ತರಪ್ರದೇಶ;ಒತ್ತುವರಿ ತೆರವು ಕಾರ್ಯಾಚರಣೆ ವೇಳೆ 45 ವರ್ಷ ವಯಸ್ಸಿನ ಮಹಿಳೆ ಹಾಗೂ ಆಕೆಯ 20 ವರ್ಷ ವಯಸ್ಸಿನ ಪುತ್ರಿ ಸಜೀವ ದಹನವಾಗಿರುವ ಘಟನೆ
ಕಾನ್ಪುರ ದೇಹತ್ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ.

ಪ್ರಮೀಳಾ ದೀಕ್ಷಿತ್ ಹಾಗೂ ನೇಹಾ ದೀಕ್ಷಿತ್ ಎಂಬವರು ಬೆಂಕಿ ಹಚ್ಚಿಕೊಂಡು ಮೃತಪಟ್ಟಿರುವುದಾಗಿ ಪೊಲೀಸರು ಹೇಳಿದ್ದಾರೆ.ಆದರೆ ಮಹಿಳೆಯರು ಮನೆಯ ಒಳಗೆ ಇದ್ದಾಗ ಇವರ ಗುಡಿಸಲಿಗೆ ಪೊಲೀಸರು ಬೆಂಕಿ ಹಚ್ಚಿದ್ದಾರೆ ಎಂದು ಮೃತರ ಕುಟುಂಬಸ್ಥರು ಆರೋಪಿಸಿದ್ದಾರೆ.

ಮದೂಲಿ ಎಂಬಲ್ಲಿ ಗ್ರಾಮಸಮಾಜ ಅಥವಾ ಸರ್ಕಾರಿ ಭೂಮಿಯ ಒತ್ತುವರಿ ತೆರವಿಗಾಗಿ ಪೊಲೀಸರು ಹಾಗೂ ಜಿಲ್ಲಾ ಕಂದಾಯ ಇಲಾಖೆ ಅಧಿಕಾರಿಗಳು ತೆರಳಿದ್ದರು. ಅಧಿಕಾರಿಗಳು ನೋಟಿಸ್ ನೀಡದೆ ಬೆಳಿಗ್ಗೆ ಬುಲ್ಡೋಜರ್‌ನೊಂದಿಗೆ ಆಗಮಿಸಿ ಕಾರ್ಯಾಚರಣೆ ನಡೆಸಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಟಾಪ್ ನ್ಯೂಸ್

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮತ್ತೆ ಮುಂದೂಡಿಕೆ;ಪಟ್ಟಿ ಬಿಡುಗಡೆ ವಿಳಂಬವಾಗುತ್ತಿರುವುದೇಕೆ? ಈ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?

ಬೆಂಗಳೂರು;ವಿಧಾನಸಭಾ ಚುನಾವಣೆ ಹಿನ್ನೆಲೆ ಇಂದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ನಿರೀಕ್ಷೆ

Developed by eAppsi.com