ಉತ್ತರಪ್ರದೇಶ;ಮಹಿಳೆಯೊಬ್ಬರನ್ನು ಕಂಬಕ್ಕೆ ಕಟ್ಟಿಹಾಕಿ ಥಳಿಸಿರುವ ಘಟನೆ ಉತ್ತರಪ್ರದೇಶದ ಸಂಭಾಲ್ ಜಿಲ್ಲೆಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.
ಈ ಕುರಿತು ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಸಯೋರಾಜ್, ಭುರೆ, ವಿರೋಜ್, ಶೆರ್ರಿ ಮಂಜು ಸೇರಿ 10 ಮಂದಿಯನ್ನು ಪ್ರಕರಣಕ್ಕೆ ಸಂಬಂಧಿಸಿ ಬಂಧಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಚಕ್ರೇಶ್ ಮಿಶ್ರಾ ಮಾಹಿತಿ ನೀಡಿದ್ದಾರೆ.
ಆರೋಪಿಗಳು ವಿರ್ಕ್ವಾರಿ ಗ್ರಾಮದ ನಿವಾಸಿ ಸುನೀತಾ ಅವರನ್ನು ಅವರ ಏಳು ವರ್ಷದ ಮಗಳ ಮುಂದೆ ಥಳಿಸಿದ್ದಾರೆ.ಏಪ್ರಿಲ್ 26 ರಂದು ಈ ಸಂಬಂಧ ಮಹಿಳೆ ದೂರು ನೀಡಿದ್ದಾರೆ.
ಎಫ್‌ಐಆರ್‌ನಲ್ಲಿ ಹೆಸರಿಸಲಾದ ಕೆಲವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿಡಿಯೊವನ್ನು ಅಂತರ್ಜಾಲದಲ್ಲಿ ಪೋಸ್ಟ್ ಮಾಡಿದ್ದನ್ನು ಗಮನಿಸಿ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ದೂರು ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದೇವೆ. ತನಿಖೆಯ ವೇಳೆ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಘಟನೆ ನಡೆದಿರುವುದು ಕಂಡುಬಂದಿದೆ ಎಂದು ಮಿಶ್ರಾ ಹೇಳಿದ್ದಾರೆ.