ಜಾತಿ ನಿಂದನೆ ಪ್ರಕರಣ; ಎಫ್ ಐಆರ್ ಗೆ ಹೈಕೋರ್ಟ್ ತಡೆ‌ ನೀಡಿದ ಬಳಿಕ ಪ್ರತಿಕ್ರಿಯಿಸಿ ಉಪೇಂದ್ರ ಹೇಳಿದ್ದೇನು ಗೊತ್ತಾ?

ಬೆಂಗಳೂರು;ಜಾತಿ ನಿಂದನೆ ಪ್ರಕರಣದಲ್ಲಿ ಎಫ್ ಐಆರ್ ಗೆ ಹೈಕೋರ್ಟ್​ ತಡೆ ನೀಡಿ ಆದೇಶದ ಬಳಿಕ ಉಪೇಂದ್ರ ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಸೋಶಿಯಲ್​ ಮೀಡಿಯಾ ಮೂಲಕ ಅವರು ತಮ್ಮ ಮಾತುಗಳನ್ನು ಹಂಚಿಕೊಂಡಿದ್ದಾರೆ.

ಅನ್ಯಾಯದ ಅನುಮಾನಕ್ಕೇ ಹೆಡೆ ಬಿಚ್ಚಿ ಬುಸುಗುಟ್ಟಿದ ಪಡೆ. ದ್ವೇಷದ ಆಟಕ್ಕೆ ತಡೆ ಹಿಡಿದ ಹೈಕೋರ್ಟ್ ನಡೆ. ಅನಿರೀಕ್ಷಿತ ಬಿಸಿಲ ತಾಪಕ್ಕೆ ಸಹೃದಯಗಳು ಹಿಡಿದ ಪ್ರೀತಿಯ ಕೊಡೆ. ನನ್ನನ್ನು ತಿದ್ದಿ ತೀಡುತ್ತಿರುವ ನಿಮ್ಮೆಲ್ಲರನ್ನೂ ಇನ್ನೂ ಹೆಚ್ಚು ಹೆಚ್ಚು ಪ್ರೀತಿಸುವ ಹೃದಯ ನನಗೆ ಕೊಡೆ ತಾಯಿ. ನನಗೆ ಕೊಡೆ. ಧನ್ಯವಾದಗಳು ಎಂದು ಉಪೇಂದ್ರ ಅವರು ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಮಾಡಿದ್ದಾರೆ.

ಪ್ರಜಾಕೀಯದ ಕುರಿತು ಅಭಿಮಾನಿಗಳ ಜೊತೆ ಮಾತನಾಡಲು ಸೋಶಿಯಲ್​ ಮೀಡಿಯಾದಲ್ಲಿ ಲೈವ್​ ಬಂದಿದ್ದ ಉಪೇಂದ್ರ ಅವರು ಹೊಲಗೇರಿ ಪದ ಬಳಕೆ ಮೂಲಕ ಆಕ್ರೋಶಕ್ಕೆ ಕಾರಣವಾಗಿದ್ದರು.

ಈ ಕುರಿತು ಅಚ್ಚುಕಟ್ಟು ಪೊಲೀಸ್​ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.ಇದೀಗ ಎಫ್​ಐಆರ್​ಗೆ ಹೈಕೋರ್ಟ್​ ತಡೆ ನೀಡಿದ್ದರಿಂದ ಉಪೇಂದ್ರ ಅವರು ನಿಟ್ಟುಸಿರು ಬಿಡುವಂತಾಗಿದೆ.

ಟಾಪ್ ನ್ಯೂಸ್