ಉಪ್ಪಿನಂಗಡಿ:ಆಟೋ ಚಾಲಕನಿಗೆ ಹಲ್ಲೆ ನಡೆಸಿ ತಂಡ ಪರಾರಿ, ಆಸ್ಪತ್ರೆಗೆ ದಾಖಲು

ಉಪ್ಪಿನಂಗಡಿ:ಆಟೋ ಚಾಲಕನಿಗೆ ಹಲ್ಲೆ ನಡೆಸಿ ತಂಡ ಪರಾರಿ, ಆಸ್ಪತ್ರೆಗೆ ದಾಖಲು

ಉಪ್ಪಿನಂಗಡಿ;ಓವರ್ ಟೇಕ್ ವಿಚಾರದಲ್ಲಿ ಜಗಳ ನಡೆದು ರಿಕ್ಷಾ ಚಾಲಕನ‌ ಮೇಲೆ ಕೇರಳ ನೋಂದಣಿಯ ಕಾರಿನಲ್ಲಿದ್ದ ತಂಡ ಹಲ್ಲೆ ನಡೆಸಿರುವ ಬಗ್ಗೆ ವರದಿಯಾಗಿದೆ.

ಕಡಬ ತಾಲೂಕಿನ ಅಡ್ಡಹೊಳೆ ಬಳಿ ಘಟನೆ ನಡೆದಿದೆ ಎನ್ನಲಾಗಿದೆ.ಶಿರಾಡಿ ಗ್ರಾಮದ ಪೆರುಮಜಲು ನಿವಾಸಿ ಆಟೋ ಚಾಲಕ ವಿಶ್ವನಾಥ್ ಈ ಕುರಿತು ದೂರು ನೀಡಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅಡ್ಡಹೊಳೆಯ ಪೆಟ್ರೋಲ್ ಬಂಕ್ ಬಳಿ ಓವರ್ ಟೇಕ್ ವಿಚಾರಕ್ಕೆ ಮಾತಿಗೆ ಮಾತು ಬೆಳೆದು ಕೇರಳ‌ ನೋಂದಣಿಯ ಕಾರಿನಲ್ಲಿದ್ದ 7-8 ಮಂದಿಯ ತಂಡ ಹಲ್ಲೆ ನಡೆಸಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

ಈ ಕುರಿತು ವಿಶ್ವನಾಥ್ ದೂರನ್ನು ನೀಡಿದ್ದು, ಪುತ್ತೂರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಪ್ರಕರಣದ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ ಎನ್ನಲಾಗಿದೆ.

ಟಾಪ್ ನ್ಯೂಸ್

ಪ್ರವೀಣ್ ನೆಟ್ಟಾರು ಪತ್ನಿಗೆ ತೋರಿದ ಮಾನವೀಯತೆ ಫಾಝಿಲ್ & ಮಸೂದ್ ಕುಟುಂಬಕ್ಕೆ ತೋರಿಸುತ್ತಾರ ಸಿದ್ದರಾಮಯ್ಯ?ಬಿಜೆಪಿ ಅವಧಿಯಲ್ಲಿ ಹತ್ಯೆಯಾದ ಯುವಕರಿಬ್ಬರ ಕುಟುಂಬಕ್ಕೆ ಪರಿಹಾರ ಕೊಡಿಸುವಲ್ಲಿ‌ ಕಾಂಗ್ರೆಸ್ಸಿಗರು ಮೌನ?

BIG NEWS ತೀವ್ರಗೊಂಡ ಮಹಿಳಾ ಕುಸ್ತಿಪಟುಗಳ ಪ್ರತಿಭಟನೆ, ನೂತನ ಸಂಸತ್ ಭವನಕ್ಕೆ ಮೆರವಣಿಗೆ ತೆರಳಲು ಯತ್ನ; ಸಾಕ್ಷಿ ಮಲಿಕ್, ವಿನೇಶ್ ಪೋಗಟ್ ಸೇರಿ ಹಲವರು ವಶಕ್ಕೆ

ನವದೆಹಲಿ;ನೂತನ ಸಂಸತ್​ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲು ಯತ್ನಿಸುತ್ತಿದ್ದ ಕುಸ್ತಿಪಟುಗಳನ್ನು ಪೊಲೀಸರು ಬಂಧಿಸಿದ್ದಾರೆ.

Developed by eAppsi.com