ಉಪ್ಪಿನಂಗಡಿ; ಕೆಟ್ಟು ನಿಂತಿದ್ದ ಲಾರಿಗೆ ಬೈಕ್ ಢಿಕ್ಕಿ, ಯುವಕ ಮೃತ್ಯು

ಇಕ್ಬಾಲ್ ಮೃತ ದುರ್ದೈವಿ.

ಉಪ್ಪಿನಂಗಡಿ;ಕೆಟ್ಟು ನಿಂತಿದ್ದ ಲಾರಿಗೆ ಹಿಂಬದಿಯಿಂದ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರವಯುವಕ ಮೃತಪಟ್ಟ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ.
ಮಂಗಳೂರು- ಬೆಂಗಳೂರು ರಸ್ತೆಯ ಉಪ್ಪಿನಂಗಡಿಯ ಸಣ್ಣಂಪಾಡಿ ಎಂಬಲ್ಲಿ ಘಟನೆ ನಡೆದಿದೆ.

ನೆಲ್ಯಾಡಿ ಮೊರೆಂಕಳ‌ನಿವಾಸಿ ಇಕ್ಬಾಲ್(25) ಮೃತ ದುರ್ದೈವಿ.ಇಕ್ಬಾಲ್ ಕೆಲಸದ ನಿಮಿತ್ತ ಉಪ್ಪಿನಂಗಡಿಗೆ ಬಂದಿದ್ದು, ಬಳಿಕ ಕೆಲಸ ಮುಗಿಸಿ ವಾಪಾಸ್ಸು ತೆರಳುವಾಗ ಬೈಕ್ ಸಣ್ಣಂಪಾಡಿ ಬಳಿ ಕೆಟ್ಟು ನಿಂತಿದ್ದ ಲಾರಿಗೆ ಹಿಂದಿನಿಂದ ಢಿಕ್ಕಿ ಹೊಡೆದು ಅಪಘಾತ ನಡೆದಿದೆ.

ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.

ರಾಜ್ಯದಲ್ಲಿ ಮತ್ತೆ 4 ದಿನ ಮಳೆ ಮುಂದುವರಿಕೆ

ಬೆಂಗಳೂರು;ರಾಜ್ಯಾದ್ಯಂತ ಇನ್ನೂ ನಾಲ್ಕು ದಿನಗಳ ಕಾಲ ಭಾರಿ ಮಳೆ ಮುಂದುವರೆಯಲಿದೆ ಎನ್ನಲಾಗಿದ್ದು, 9 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಜುಲೈ 26ರಂದು ಬೀದರ್, ಕಲಬುರಗಿ, ಉಡುಪಿ, ಬೆಳಗಾವಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.

ಕೊಪ್ಪಳ, ಬಳ್ಳಾರಿ, ಚಿತ್ರದುರ್ಗ, ಹಾಸನ, ಯಾದಗಿರಿ, ರಾಯಚೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಜುಲೈ 27ರಂದು ಶಿವಮೊಗ್ಗ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಬೆಳಗಾವಿ, ವಿಜಯಪುರ, ದಕ್ಷಿಣ ಕನ್ನಡ, ಹಾಸನ, ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂದಿನ ನಾಲ್ಕು ದಿನ ಬೆಂಗಳೂರು ನಗರ ಗ್ರಾಮಾಂತರ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಟಾಪ್ ನ್ಯೂಸ್