ಉಪ್ಪಿನಂಗಡಿ:ಅನಾರೋಗ್ಯದಿಂದ ಮಗು ಮೃತಪಟ್ಟಿದ್ದು, ಇದೀಗ ಮಗುವಿನ ಸಾವಿಗೆ ಪತಿ ಕಾರಣವಿರಬಹುದು ಎಂದು ಶಂಕಿಸಿ ಪತ್ನಿ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.
ನೆಕ್ಕಿಲಾಡಿ ಗ್ರಾಮದ ಶ್ರೀಧರ ನಾಯ್ಕ ಮತ್ತು ಚಿತ್ರಾ ದಂಪತಿಯ ಎಂಟು ತಿಂಗಳ ಮಗು ಜೀವಿತ್ ತೀವ್ರ ಜ್ವರದ ಕಾರಣ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟಿದೆ.
ಜ್ವರದಿಂದ ಬಳಲುತ್ತಿದ್ದ ಮಗುವಿನೊಂದಿಗೆ ನಾನು ನನ್ನ ತವರು ಮನೆಗೆ ಹೋಗುತ್ತೇನೆ ಎಂದು ನನ್ನ ಗಂಡನಿಗೆ ಹೇಳಿದಾಗ ಪತಿ ಶ್ರೀಧರ ಕೋಪಗೊಂಡು ನನ್ನನ್ನು ತಳ್ಳಿದ್ದು, ಈ ವೇಳೆ ನಾನು ಮಗುವಿನೊಂದಿಗೆ ನಾನು ಕೆಳಗೆ ಬಿದ್ದಿದ್ದೇನೆ.ಈ ವೇಳೆ ಮಗುವಿಗೆ ಗಾಯವಾಗಿರುವ ಸಾಧ್ಯತೆ ಬಗ್ಗೆ ಚಿತ್ರಾ ತನ್ನ ಮಗುವಿನ ಮರಣದ ಕುರಿತು ಸಂಶಯ ವ್ಯಕ್ತಪಡಿಸಿ ತನ್ನ ಗಂಡನ ಮೇಲೆ ದೂರು ದಾಖಲಿಸಿದ್ದಾರೆ.
ಈ ಕುರಿತು ಮಗುವಿನ ಮರಣೋತ್ತರ ಪರೀಕ್ಷೆಯ ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ.