ಉಪ್ಪಿನಂಗಡಿ; ಮಹಿಳೆ ಜೊತೆ ಅನುಚಿತವಾಗಿ ವರ್ತನೆ, ಮಗನ ಮೇಲೆ ಹಲ್ಲೆ

-ಮುಝಮ್ಮಿಲ್ ಹಲ್ಲೆಗೊಳಗಾದವರು

ಉಪ್ಪಿನಂಗಡಿ: ಮಹಿಳೆಯ ಜೊತೆ ಅನುಚಿತವಾಗಿ ವರ್ತಿಸಿ ಆಕೆಯ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದ ಪುತ್ರನಿಗೆ ಥಳಿಸಿದ ಘಟನೆ ತೆಕ್ಕಾರು ಪಿಂಡಿಕಲ್ಲು ಎಂಬಲ್ಲಿ ನಡೆದಿದೆ.

ಹಲ್ಲೆಗೊಳಗಾದ ಯುವಕನನ್ನು ಮುಝಮ್ಮಿಲ್ (19) ಎಂಡೋಸಲ್ಫಾನ್ ಪೀಡಿತ ಸಂತ್ರಸ್ತನಾಗಿದ್ದು ಮಾನಸಿಕ ಖಾಯಿಲೆಯಿಂದ ಬಳಲುತ್ತಿರುವವನಾಗಿದ್ದಾನೆ ಎನ್ನಲಾಗಿದೆ. ಸಂತ್ರಸ್ತ ಮಹಿಳೆಯನ್ನು ಆತನ ತಾಯಿ ಮೈಮುನ (38) ಎಂದು ಗುರುತಿಸಲಾಗಿದೆ.

ಗುರುವಾರ ಸಂಜೆ ಐದು ಮಂದಿ ದುಷ್ಕರ್ಮಿಗಳ ಗುಂಪು ಒಂಟಿ ಮಹಿಳೆ ಹಾಗೂ ಎಂಡೋಸಲ್ಫಾನ್ ಪೀಡಿತ ಮಗ ವಾಸವಿರುವ ಮನೆಗೆ ನುಗ್ಗಿ ಮಹಿಳೆಯ ಜೊತೆ ಅನುಚಿತವಾಗಿ ವರ್ತಿಸಿದ್ದಾರೆ. ಈ ವೇಳೆ ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಮಗ ಅಡ್ಡ ಬಂದಾಗ ಮಗನಿಗೂ ಮನಬಂದಂತೆ ಥಳಿಸಿದ್ದರು ಎನ್ನಲಾಗಿದೆ.

ಆರೋಪಿಗಳ ಪೈಕಿ ಓರ್ವನನ್ನು ಉಪ್ಪಿನಂಗಡಿಯ ಸಮೀಪದ ಮಹಮ್ಮದ್ ಎಂದು ಗುರುತಿಸಲಾಗಿದೆ. ಉಳಿದ ನಾಲ್ವರು ಅಪರಿಚಿತರು ಎನ್ನಲಾಗಿದೆ.

ಸಂತ್ರಸ್ತ ಮಹಿಳೆ ಹಾಗೂ ಹಲ್ಲೆಗೊಳಗಾದ ಮಗ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದು, ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್