ಮಾಜಿ ಶಾಸಕ ಯು ಆರ್ ಸಭಾಪತಿ ನಿಧನ

ಉಡುಪಿ:ಮಾಜಿ ಶಾಸಕ,‌ ಕಾಂಗ್ರೆಸ್ ನಾಯಕ ಯು.ಆರ್. ಸಭಾಪತಿ‌ ಇಂದು ನಿಧನರಾಗಿದ್ದಾರೆ.

ಉಡುಪಿ ಬಡಗುಪೇಟೆ ನಿವಾಸಿಯಾಗಿದ್ದ ಸಭಾಪತಿ (71) ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನರಾಗಿದ್ದಾರೆ.

1952 ರಲ್ಲಿ ಹುಟ್ಟಿದ ಅವರು, 1994 ರಲ್ಲಿ ಕರ್ನಾಟಕ ಕಾಂಗ್ರೆಸ್ ಪಕ್ಷದಿಂದ ಚುನಾಯಿತರಾಗಿ ವಿಧಾನಸಭೆ ಪ್ರವೇಶಿಸಿದ್ದರು.ಆ ಬಳಿಕ ಕೆಸಿಪಿ ಕಾಂಗ್ರೆಸ್ ನೊಂದಿಗೆ ವಿಲೀನಗೊಂಡಿತ್ತು.

1999ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದು ಶಾಸಕ ಆಗಿ ಮರು ಆಯ್ಕೆಯಾಗಿದ್ದರು.

ಇನ್ನು 2012ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಯು.ಆರ್.ಸಭಾಪತಿ ಸ್ಪರ್ಧಿಸಿದ್ದರು.2004 ರಲ್ಲಿ ಇವರು ರಘಪತಿ ಭಟ್ ಎದುರು ಪರಾಭವಗೊಂಡಿದ್ದರು.

ಇವರು ಪತ್ನಿ, ಎರಡು ಗಂಡು, ಒಂದು ಹೆಣ್ಣು ಮಗಳನ್ನು ಅಗಲಿದ್ದಾರೆ.ಉಡುಪಿ ರಾಜಕೀಯದಲ್ಲಿ ಸಕ್ರಿಯರಾಗಿದ್ದ ಪ್ರಮುಖ‌ ರಾಜಕಾರಣಿ ಇದೀಗ ಅಗಲಿದ್ದು, ಗಣ್ಯರು ಕಂಬನಿ ಮಿಡಿದಿದ್ದಾರೆ.

ಟಾಪ್ ನ್ಯೂಸ್

ಪ್ರವೀಣ್ ನೆಟ್ಟಾರು ಪತ್ನಿಗೆ ತೋರಿದ ಮಾನವೀಯತೆ ಫಾಝಿಲ್ & ಮಸೂದ್ ಕುಟುಂಬಕ್ಕೆ ತೋರಿಸುತ್ತಾರ ಸಿದ್ದರಾಮಯ್ಯ?ಬಿಜೆಪಿ ಅವಧಿಯಲ್ಲಿ ಹತ್ಯೆಯಾದ ಯುವಕರಿಬ್ಬರ ಕುಟುಂಬಕ್ಕೆ ಪರಿಹಾರ ಕೊಡಿಸುವಲ್ಲಿ‌ ಕಾಂಗ್ರೆಸ್ಸಿಗರು ಮೌನ?

BIG NEWS ತೀವ್ರಗೊಂಡ ಮಹಿಳಾ ಕುಸ್ತಿಪಟುಗಳ ಪ್ರತಿಭಟನೆ, ನೂತನ ಸಂಸತ್ ಭವನಕ್ಕೆ ಮೆರವಣಿಗೆ ತೆರಳಲು ಯತ್ನ; ಸಾಕ್ಷಿ ಮಲಿಕ್, ವಿನೇಶ್ ಪೋಗಟ್ ಸೇರಿ ಹಲವರು ವಶಕ್ಕೆ

ನವದೆಹಲಿ;ನೂತನ ಸಂಸತ್​ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲು ಯತ್ನಿಸುತ್ತಿದ್ದ ಕುಸ್ತಿಪಟುಗಳನ್ನು ಪೊಲೀಸರು ಬಂಧಿಸಿದ್ದಾರೆ.

Developed by eAppsi.com