ಕಾಸರಗೋಡು:ಐವರು ಬಾಲಕಿಯರಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಮದ್ರಸ ಶಿಕ್ಷಕನನ್ನು ಬಂಧಿಸಿರುವ ಘಟನೆ ಕಾಸರಗೋಡಿನಲ್ಲಿ ನಡೆದಿದೆ.
ದಕ್ಷಿಣ ಕನ್ನಡದ ಉಪ್ಪಿನಂಗಡಿ ಸಮೀಪದ ನಿವಾಸಿ ಅಬ್ದುಲ್ ಹಮೀದ್ (53) ಬಂಧಿತ ಆರೋಪಿ.
ಮದ್ರಸ ಶಿಕ್ಷಕನಾಗಿದ್ದ ಅಬ್ದುಲ್ ಹಮೀದ್ ಏಳು ಮತ್ತು ಒಂಬತ್ತನೇ ತರಗತಿಯಲ್ಲಿ ಓದುತ್ತಿರುವ ಐವರು ಬಾಲಕಿಯರಿಗೆ ಕಿರುಕುಳ ನೀಡಿದ್ದಾರೆ ಎಂದು ದೂರು ನೀಡಲಾಗಿತ್ತು.
ಈ ಕೇಸ್ ದಾಖಲಿಸಿಕೊಂಡ ಆದೂರು ಪೊಲೀಸರು ಹಮೀದ್ ಗೆ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ವರದಿಯಾಗಿದೆ.