ಯುಟಿ ಖಾದರ್ ಗೆ ಸ್ಪೀಕರ್ ಹುದ್ದೆ? ಖಾದರ್ ಗೆ ಇಲ್ಲ ಸಚಿವ ಸ್ಥಾನ? ಏನಿದು ಬೆಳವಣಿಗೆ?

ಬೆಂಗಳೂರು;ರಾಜ್ಯ ವಿಧಾನಸಭೆಯ ನೂತನ ಸ್ಪೀಕರ್ ಹುದ್ದೆಗೆ ಮಾಜಿ ಸಚಿವ ಯು ಟಿ ಖಾದರ್ ಅವರನ್ನು ಕಾಂಗ್ರೆಸ್ ಫೈನಲ್ ಮಾಡಿದೆ ಎನ್ನಲಾಗಿದೆ.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಮತ್ತು ಕೆ ಸಿ ವೇಣುಗೋಪಾಲ್ ಅವರು ಖಾದರ್ ಅವರನ್ನು ಕರೆದು ಮಾತನಾಡಿದ್ದು ಸ್ಪೀಕರ್ ಹುದ್ದೆಯನ್ನು ಒಪ್ಪಿಕೊಳ್ಳುವಂತೆ ಹೇಳಿದ್ದಾರೆ ಎನ್ನಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಕೂಡ ಖಾದರ್ ಜೊತೆ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗಿದೆ.

ಇದೀಗ 3 ದಿನ ವಿಧಾನಸಭೆಯ ವಿಶೇಷ ಅಧಿವೇಶನ ನಡೆಯುತ್ತಿದ್ದು, ಹಂಗಾಮಿ ಸ್ಪೀಕರ್ ಆಗಿ ಆರ್ ವಿ ದೇಶಪಾಂಡೆ ಅವರಿಗೆ ನೇಮಕ ಮಾಡಲಾಗಿದೆ.ಆದರೆ ಸಚಿವ ಸ್ಥಾನದ ಆಕಾಂಕ್ಷಿಯಾಗಿರುವ ಆರ್ ವಿದೇಶಪಾಂಡೆ ಮೊದಲಿನಿಂದಲೇ ಸ್ಪೀಕರ್ ಹುದ್ದೆಗೆ ನಿರಾಕರಿಸಿದ್ದರು.

ಇದಲ್ಲದೆ ಈ ಮೊದಲ ಎರಡು ಅವಧಿಯಲ್ಲಿ ಸ್ಪೀಕರ್ ಆಗಿದ್ದ ರಮೇಶ್ ಕುಮಾರ್ ಹಾಗೂ ವಿಶ್ವೇಶ್ವರ ಹೆಗ್ಡೆ ಕಾಗೇರಿ ಅವರು ಸೋಲನ್ನು ಕಂಡಿದ್ದರು.ಇದರಿಂದ ಕೆಲವರು ಸ್ಪೀಕರ್ ಹುದ್ದೆಗೆ ಹಿಂದೇಟು ಹಾಕುತ್ತಿದ್ದಾರೆ ಎಂದು ಕೂಡ ಹೇಳಲಾಗುತ್ತಿದೆ.

ಇದೀಗ ಎರಡು ವರ್ಷಗಳ ಅವಧಿಗೆ ಖಾದರ್ ಗೆ ಸ್ಪೀಕರ್ ಹುದ್ದೆ ನೀಡಿ‌ ಬಳಿಕ ಸಂಪುಟ ವಿಸ್ತರಣೆ ವೇಳೆ ಸಚಿವ ಸ್ಥಾನ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಟಾಪ್ ನ್ಯೂಸ್

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ; ಕರಾವಳಿ ಜಿಲ್ಲೆಗೆ ಚಂಡಮಾರುತದ ಭೀತಿ, ಬಿರುಗಾಳಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಉಡುಪಿ;ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಕರವಾಳಿ ಜಿಲ್ಲೆಗಳಿಗೆ ಚಂಡಮಾರುತದ ಭೀತಿ ಎದುರಾಗಿದೆ. ಅರಬ್ಬಿ

ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ತಡೆಗೆ “ಆ್ಯಂಟಿ ಕಮ್ಯುನಲ್‌ ವಿಂಗ್” ಸ್ಥಾಪನೆ; ಹೇಗಿರಲಿದೆ ಇದರ ರೂಪುರೇಷೆ? ಗೃಹಸಚಿವರು ಹೇಳಿದ್ದೇನು?

ಮಂಗಳೂರು:ನೈತಿಕ ಪೊಲೀಸ್ ಗಿರಿ ತಡೆಗೆ ಮಂಗಳೂರು ನಗರದಲ್ಲಿ ಆ್ಯಂಟಿ ಕಮ್ಯುನಲ್‌ ವಿಂಗ್ ಆರಂಭಿಸಲು

Developed by eAppsi.com