ಮಂಗಳೂರಿನಲ್ಲಿ ಯುಟಿ ಖಾದರ್ ಗೆ ಭಾರೀ ಮುನ್ನಡೆ, ಶಿಕ್ಷಣ ಸಚಿವರಾಗಿದ್ದ ಬಿಸಿ ನಾಗೇಶ್ ಗೆ ಭಾರೀ‌ ಹಿನ್ನೆಡೆ, ಹುಬ್ಬಳ್ಳಿಯಲ್ಲಿ ಜಗದೀಶ್ ಶೆಟ್ಟರ್ ಗೆ ಹಿನ್ನೆಡೆ

ಬೆಂಗಳೂರು;ರಾಜ್ಯ ವಿಧಾನ ಸಭಾ ಚುನಾವಣೆಯ ಮತ ಎಣಿಕೆ ಮುಂದುವರಿದಿದೆ.ಮಂಗಳೂರು ಕ್ಷೇತ್ರದಲ್ಲಿ ಯುಟಿ ಖಾದರ್ ಭಾರೀ ಮುನ್ನಡೆ ಸಾಧಿಸಿದೆ.

ಮುಧೋಳದಲ್ಲಿ ಗೋವಿಂದ ಕಾರಜೋಳ ಅವರಿಗೆ ಹಿನ್ನೆಡೆಯಾಗಿದೆ. ಚೆನ್ನಪಟ್ಟಣದಲ್ಲಿ ಕುಮಾರಸ್ವಾಮಿಗೆ ಮುನ್ನಡೆ, ಬಿ.ಸಿ ನಾಗೇಶ್ ಗೆ ಹಿನ್ನೆಡೆಯಾಗಿದೆ. ಗಂಗಾವತಿಯಲ್ಲಿ ಜನಾರ್ಧನ ರೆಡ್ಡಿ ಭಾರೀ ಮುನ್ನೆಡೆಯಾಗಿದೆ.
ಜಮೀರ್ ಅಹ್ಮದ್ ಗೆ ಮುನ್ನಡೆಯಾಗಿದೆ.ಜಗದೀಶ್ ಶೆಟ್ಟರ್ ಗೆ ಹುಬ್ಬಳ್ಳಿಯಲ್ಲಿ ಹಿನ್ನೆಡೆಯಾಗಿದೆ.

ಕೊಳ್ಳೇಗಾಲದಲ್ಲಿ ಎನ್ ಮಹೇಶ್ ಗೆ 14,000 ಮತಗಳ ಹಿನ್ನೆಡೆಯಾಗಿದೆ. ಕೈ ಅಭ್ಯರ್ಥಿ ಕೃಷ್ಣಮೂರ್ತಿ ಬಾರೀ ಮುನ್ನಡೆ ಸಾಧಿಸಿದೆ.

ಹಾಸನದಲ್ಲಿ ಬಿಜೆಪಿಯ ಪ್ರೀತಂಗೌಡ ಮುನ್ನಡೆ, ದರ್ಶನ್ ಪುಟ್ಟಣ್ಣಯ್ಯಗೆ ಮುನ್ನಡೆ, ನಿಪ್ಪಾಣಿಯಲ್ಲಿ ಶಶಿಕಲಾ ಜೊಲ್ಲೆ ಮುನ್ನೆಡೆ, 2ನೇ ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದ್ದು, ಇನಾಯತ್ ಅಲಿ ಅವರು ಬಿಜೆಪಿ ಅಭ್ಯರ್ಥಿ ಭರತ್ ಶೆಟ್ಟಿಗಿಂತ 1099 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ. ಇನಾಯತ್ ಅಲಿ 10371 ಮತಗಳನ್ನು ಪಡೆದರೆ, ಬಿಜೆಪಿ ಅಭ್ಯರ್ಥಿ, ಹಾಲಿ ಶಾಸಕ ಭರತ್ ಶೆಟ್ಟಿ 9272 ಮತಗಳನ್ನು ಪಡೆದಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಅಶೋಕ್ ರೈಗೆ ಮುನ್ನಡೆಯಾಗಿದೆ.ಬೆಳ್ತಂಗಡಿಯಲ್ಲಿ ಹರೀಶ್ ಪೂಂಜಾಗೆ ಮುನ್ನಡೆಯಾಗಿದೆ.

ಸಿಎಂ ಬೊಮ್ಮಯಿಯ ಐದು ಕ್ಷೇತ್ರಗಳಲ್ಲಿ ಬಿಜೆಪಿಗೆ ಹಿನ್ನೆಡೆಯಾಗಿದೆ.

ಸಿಟಿ ರವಿಗೆ ಚಿಕ್ಕಮಗಳೂರಿನಲ್ಲಿ ಭಾರೀ ಹಿನ್ನೆಡೆಯಾಗಿದೆ.ಕಾಂಗ್ರೆಸ್ ನ ತಮ್ಮಯ ಮುಂದುವರಿಕೆ ಮುಂದುವರಿದಿದೆ.ಗಾಂಧಿನಗರದಲ್ಲಿ ದಿನೇಶ್ ಗುಂಡೂರಾವ್ ಗೆ ಹಿನ್ನೆಡೆಯಾಗಿದೆ.

ಈಗ 115 ಕ್ಷೇತ್ರಗಳ್ಲಲ್ಲಿ ಕಾಂಗ್ರೆಸ್, 80 ಕ್ಷೇತ್ರಗಳಲ್ಲಿ ಬಿಜೆಪಿ, 24 ಕ್ಷೇತ್ರಗಳಲ್ಲಿ ಜೆಡಿಎಸ್ ಮುನ್ನಡೆ ಸಾಧಿಸಿದೆ.

ಟಾಪ್ ನ್ಯೂಸ್

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ; ಕರಾವಳಿ ಜಿಲ್ಲೆಗೆ ಚಂಡಮಾರುತದ ಭೀತಿ, ಬಿರುಗಾಳಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಉಡುಪಿ;ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಕರವಾಳಿ ಜಿಲ್ಲೆಗಳಿಗೆ ಚಂಡಮಾರುತದ ಭೀತಿ ಎದುರಾಗಿದೆ. ಅರಬ್ಬಿ

ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ತಡೆಗೆ “ಆ್ಯಂಟಿ ಕಮ್ಯುನಲ್‌ ವಿಂಗ್” ಸ್ಥಾಪನೆ; ಹೇಗಿರಲಿದೆ ಇದರ ರೂಪುರೇಷೆ? ಗೃಹಸಚಿವರು ಹೇಳಿದ್ದೇನು?

ಮಂಗಳೂರು:ನೈತಿಕ ಪೊಲೀಸ್ ಗಿರಿ ತಡೆಗೆ ಮಂಗಳೂರು ನಗರದಲ್ಲಿ ಆ್ಯಂಟಿ ಕಮ್ಯುನಲ್‌ ವಿಂಗ್ ಆರಂಭಿಸಲು

Developed by eAppsi.com