ಮುಸ್ಲಿಮರ ಮೀಸಲಾತಿ ರದ್ದತಿ ಬಗ್ಗೆ ಯುಟಿ ಖಾದರ್ ಹೇಳಿದ್ದೇನು?

ಮಂಗಳುರು;ಮುಸ್ಲಿಮರಿಗೆ 2B ಯಡಿ ಇದ್ದ ಶೇ.4 ಮೀಸಲಾತಿಯನ್ನು ರಾಜ್ಯ ಸರಕಾರ ರದ್ದುಪಡಿಸಿರುವುದಕ್ಕೆ ಶಾಸಕ ಯುಟಿ ಖಾದರ್ ಖಂಡಿಸಿದ್ದಾರೆ.

ಸಿಎಂ ಬೊಮ್ಮಾಯಿಯ ಹೇಳಿಕೆಯ ಹಿಂದೆ ಚುನಾವಣಾ ರಾಜಕಾರಣ ಇದೆ.ಸಾಮಾಜಿಕ ನ್ಯಾಯವನ್ನು ಗಾಳಿಗೆ ತೂರಿರುವ ಈ ಪ್ರಕ್ರಿಯೆಯನ್ನು ಕಾನೂನು ಪ್ರಕಾರ ಅನುಷ್ಠಾನ ಗೊಳಿಸಲು ಸಾಧ್ಯವಿಲ್ಲ.ಇದು ರಾಜ್ಯ ಸರಕಾರದ ಸಂವಿಧಾನ ವಿರೋಧಿ ನಡೆಯಾಗಿದೆ. ಚುನಾವಣೆಯ ಸಂದರ್ಭ ಅಲ್ಪಸಂಖ್ಯಾತ ಮುಸಲ್ಮಾನರ ಮೀಸಲಾತಿಯನ್ನು ಮುನ್ನಲೆಗೆ ತರಲಾಗಿದೆ. ಮುಂದಿನ ದಿನಗಳಲ್ಲಿ ದಲಿತರು, ಹಿಂದುಳಿದ ವರ್ಗಗಳ ಮೀಸಲಾತಿಯನ್ನು ಕೂಡ ರದ್ದುಪಡಿಸುವ ಹುನ್ನಾರ ಇದಾಗಿದೆ ಎಂದು ಯು.ಟಿ. ಖಾದರ್ ಹೇಳಿದ್ದಾರೆ.

ಶಿಕ್ಷಣ, ಉದ್ಯೋಗದ ಮೀಸಲಾತಿ ಪ್ರಕ್ರಿಯೆಯಲ್ಲೂ ಗೊಂದಲ ಸೃಷ್ಟಿಯಾಗಿದೆ.4ರಷ್ಟು ಮೀಸಲಾತಿಯನ್ನು ರದ್ದುಪಡಿಸಿ ಇಡಬ್ಲ್ಯುಎಸ್ ಮೂಲಕ ಮೇಲ್ವರ್ಗದವರ ಜೊತೆ ಸೇರಿಸಿದ್ದು ಸರಿಯಾದ ಕ್ರಮವಲ್ಲ. ಭ್ರಷ್ಟಾಚಾರವನ್ನು ಮರೆಮಾಚಲು ಉದ್ದೇಶಪೂರ್ವಕವಾಗಿ ರಾಜ್ಯ ಸರಕಾರ ಮುಸ್ಲಿಮರಿಗಿದ್ದ 2ಬಿ ಮೀಸಲಾತಿಯನ್ನು ರದ್ದುಪಡಿಸಿದೆ ಎಂದು ಯು.ಟಿ.ಖಾದರ್ ಆರೋಪಿಸಿದರು.

ಈ ನಿಟ್ಟಿನಲ್ಲಿ ಮುಂದಿನ ಹೋರಾಟದ ಬಗ್ಗೆ ಚರ್ಚಿಸಲು ಮಾಜಿ ರಾಜ್ಯಸಭಾ ಸದಸ್ಯ ರಹ್ಮಾನ್ ಖಾನ್ ನೇತೃತ್ವದಲ್ಲಿ ಮಾ.25ರಂದು ಬೆಂಗಳೂರಿನಲ್ಲಿ ಮುಸ್ಲಿಂ ಮುಖಂಡರ ಸಭೆಯನ್ನು ಕರೆಯಲಾಗಿದೆ ಎಂದು ಖಾದರ್ ಹೇಳಿದ್ದಾರೆ.

ಟಾಪ್ ನ್ಯೂಸ್

ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಮೀಲಾದ್ ರ್ಯಾಲಿಯಲ್ಲಿ ತೆರಳುತ್ತಿದ್ದ ಯುವಕರು

ಕಾಪು;ಮೀಲಾದ್ ರ್ಯಾಲಿಯಲ್ಲಿ ಸಾಗುತ್ತಿದ್ದ ಯುವಕರ ಗುಂಪು ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ