ಮಹಿಳೆಯನ್ನು ಪೊಲೀಸರು ರಸ್ತೆಯಲ್ಲಿ ಎಳೆದೊಯ್ದ ವಿಡಿಯೋ ವೈರಲ್..

ಉತ್ತರಪ್ರದೇಶ; ಪೊಲೀಸರು ದಿವ್ಯಾಂಗ ಮಹಿಳೆಯನ್ನು ಠಾಣೆಯ ಎದುರು ಎಳೆದೊಯ್ದಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಉತ್ತರಪ್ರದೇಶದ ಹರ್ದೋಯ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.ಪೊಲೀಸರು ಆಕೆಯ ಮಾನಸಿಕ ಸ್ಥಿತಿ ಸರಿ ಇರಲಿಲ್ಲ ಎಂದು ಹೇಳಿದ್ದಾರೆ.

ಪತಿಯ ಬಗ್ಗೆ ದೂರು ನೀಡಲು ಮಹಿಳೆ ಪೊಲೀಸ್ ಠಾಣೆಗೆ ಬಂದಿದ್ದಳು. ಆದರೆ ಅಲ್ಲಿ ಠಾಣೆಯ ಗೋಡೆಯನ್ನು ಹತ್ತಲು ಪ್ರಯತ್ನಿಸಿದ್ದಾಳೆ. ಇದನ್ನು ಗಮನಿಸಿದ ಮಹಿಳಾ ಪೊಲೀಸರು ಅವಳ ಬಳಿ ಹೋಗಿದ್ದಾರೆ. ಈ ವೇಳೆ ಆಕೆ ರಸ್ತೆಯಲ್ಲೇ ಕುಳಿತು ಪ್ರತಿಭಟನೆ ಪ್ರಾರಂಭಿಸಿದ್ದಾರೆ. ಆಗ ಮಹಿಳಾ ಪೇದೆಗಳು ಆಕೆಯ ಎರಡೂ ಕೈಗಳನ್ನು ಹಿಡಿದು ರಸ್ತೆಯಲ್ಲಿ ಎಳೆದೊಯ್ದಿದ್ದಾರೆ ಎಂದು ಹೇಳಿದ್ದಾರೆ.

ಇದನ್ನು ರೆಕಾರ್ಡ್ ಮಾಡಿ ಯಾರೋ ವೈರಲ್ ಮಾಡಿದ್ದಾರೆ. ಘಟನೆ ಕುರಿತು ತನಿಖೆಗೆ ಹಿರಿಯ ಅಧಿಕಾರಿಗಳು ಆದೇಶಿಸಿದ್ದಾರೆ.

ಟಾಪ್ ನ್ಯೂಸ್