ಸಹೋದರಿಯ ಶಿರಚ್ಛೇದ ಮಾಡಿ ತಲೆಯೊಂದಿಗೆ ಬೀದಿಯಲ್ಲಿ ತಿರುಗಾಡಿದ ಅಣ್ಣ;ಭಯಾನಕ ಕೃತ್ಯ ವರದಿ

-ಆರೋಪಿ ರಿಯಾಝ್ ಗೆ ಪೊಲೀಸರು ಬಂಧಿಸಿದ್ದಾರೆ.

ಉತ್ತರಪ್ರದೇಶ;24 ವರ್ಷದ ಯುವಕನೊಬ್ಬ ತನ್ನ ಸಹೋದರಿಯ ಶಿರಚ್ಛೇದ ಮಾಡಿದ ಪ್ರಕರಣ ಬಾರಾಬಂಕಿ ಜಿಲ್ಲೆಯ ಹಳ್ಳಿಯೊಂದರಿಂದ ವರದಿಯಾಗಿದೆ.

ರಿಯಾಜ್ ಎಂದು ಗುರುತಿಸಲಾದ ಆರೋಪಿಯು ತನ್ನ ಸಹೋದರಿ ಆಶಿಫಾಳ ಶಿರಚ್ಛೇದ ಮಾಡಿದ್ದಾನೆ.ತಂಗಿಯ ಪ್ರೇಮ ಸಂಬಂಧವನ್ನು ವಿರೋಧಿಸಿ ಈ ಕೃತ್ಯ ಎಸಗಿದ್ದು ಆರೋಪಿ ರಿಯಾಝ್ ಗೆ ಬಂಧಿಸಲಾಗಿದೆ.

ಮಿತ್ವಾರಾ ಗ್ರಾಮದಲ್ಲಿ ರಿಯಾಜ್ ತನ್ನ ಸಹೋದರಿಯ ಶಿರಚ್ಛೇದ ಮಾಡಿದ್ದಾನೆ.ಆಕೆ ತನ್ನ ಗ್ರಾಮದ ವ್ಯಕ್ತಿಯೊಂದಿಗೆ ಸಂಬಂಧ ಹೊಂದಿದ್ದಳು ಎನ್ನಲಾಗಿದೆ.

ಆಕೆ ತನ್ನ ಪ್ರಿಯಕರನೊಂದಿಗೆ ಓಡಿ ಹೋಗಿದ್ದಳು.ಈ ಸಂಬಂಧ ಯುವತಿಯ ತಂದೆ ದೂರು ದಾಖಲಿಸಿದ್ದರು. ತಂಗಿಯ ಪ್ರೇಮದ ಬಗ್ಗೆ ಕೋಪಗೊಂಡ ರಿಯಾಜ್ ಆಕೆಯ ಶಿರಚ್ಛೇದ ಮಾಡಿದ್ದಾನೆ ಎಂದು ವರದಿಯಾಗಿದೆ.

ಸಿಟ್ಟಿನ ಭರದಲ್ಲಿ ರಿಯಾಜ್ ಹರಿತವಾದ ಆಯುಧದಿಂದ ತಂಗಿಯ ತಲೆ ಕಡಿದಿದ್ದಾನೆ.ಕೃತ್ಯವೆಸಗಿದ ನಂತರ ಸಹೋದರಿಯ ಕತ್ತರಿಸಿದ ತಲೆಯನ್ನು ಕೈಯಲ್ಲಿ ಹಿಡಿದು ಮನೆಯಿಂದ ಹೊರಗೆ ಹೋಗಿದ್ದಾನೆ.

ಭಯಭೀತರಾದ ಗ್ರಾಮಸ್ಥರು ಕೂಡಲೇ ಫತೇಪುರ್ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.ಪೊಲೀಸರು ಗ್ರಾಮವನ್ನು ತಲುಪಿ ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅಶುತೋಷ್ ಮಿಶ್ರಾ ತಿಳಿಸಿದ್ದಾರೆ.

ಪೊಲೀಸರು ಆಶಿಫಾಳ ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಈ ಘಟನೆಯ ಬಗ್ಗೆ
ಹೆಚ್ಚಿನ ತನಿಖೆ ನಡೆಯುತ್ತಿದೆ.

ಟಾಪ್ ನ್ಯೂಸ್