ಪೋಷಕರು ಬುದ್ದಿವಾದ ಹೇಳಿದ್ದಕ್ಕೆ ಮನನೊಂದು ಯುವತಿ ಆತ್ಮಹತ್ಯೆ

ವಿದ್ಯಾರ್ಥಿನಿಯೋರ್ವಳು ಮಾಲ್‌ನಲ್ಲಿ ಹೊಸ ವರ್ಷದ ಮುನ್ನಾದಿನ ಫೋಟೋಶೂಟ್ ಮಾಡಲು ಪೋಷಕರು ಅನುಮತಿ ಕೊಟ್ಟಿಲ್ಲ ಎಂದು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಂಗಳೂರಿನ ಸುಧಾಮನಗರ ನಿವಾಸಿ ಬಿಬಿಎ ವಿದ್ಯಾರ್ಥಿನಿ ವರ್ಷಿಣಿ(21) ಭಾನುವಾರ ಬೆಳಗ್ಗೆ ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ವರ್ಷಿಣಿ ಫೋಟೋಗ್ರಫಿ ಕೋರ್ಸ್ ಮುಗಿಸಿದ್ದು, ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿದ್ದಳು. ಮಾಲ್‌ನಲ್ಲಿ ಪೋಟೋಶೂಟ್‌ ಇದೆ ನಾನು ಹೋಗುತ್ತೇನೆ ಎಂದು ಪೋಷಕರಲ್ಲಿ ಹೇಳಿದ್ದಾಳೆ. ಇದಕ್ಕೆ ಪೋಷಕರು ಅನುಮತಿ ಕೊಟ್ಟಿರಲಿಲ್ಲ.ಮಾಲ್​ಗೆ ಹೋಗಬೇಡ ಎಂದು ಬುದ್ಧಿವಾದ ಹೇಳಿದ್ದರು.ಇದರಿಂದ ನೊಂದ ವರ್ಷಿಣಿ ಮನೆಯ ಕೋಣೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಈ ಕುರಿತು ಪೊಲೀಸ್‌ ಅಧಿಕಾರಿಯೋರ್ವರು ಮಾಹಿತಿ ನೀಡಿದ್ದು, ಹೊಸ ವರ್ಷದ ಮುನ್ನಾ ದಿನದಂದು ಮಾಲ್‌ನಲ್ಲಿ ಫೋಟೋಶೂಟ್ ಮಾಡಲು ವರ್ಷಿಣಿ ಪೋಷಕರ ಜೊತೆ ಅನುಮತಿ ಕೇಳಿದ್ದಾರೆ. ಪೋಷಕರು ಅನುಮತಿ ನಿರಾಕರಿಸಿದ ನಂತರ ಆಕೆ ತನ್ನ ಕೋಣೆಗೆ ತೆರಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ನಮಗೆ ಯಾವುದೇ ಸೂಸೈಡ್ ನೋಟ್ ಸಿಕ್ಕಿಲ್ಲ. ಆದರೆ ಘಟನೆಯ ಮೊದಲು ಅವರು ಯಾರಿಗಾದರೂ ಸಂದೇಶ ಕಳುಹಿಸಿದ್ದಾರಾ ಎಂದು ನೋಡಲು ಅವರ ಮೊಬೈಲ್ ಫೋನ್ ಪರಿಶೀಲನೆ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ.

ಈ ಕುರಿತು ಪೋಷಕರ ದೂರಿನ ಮೇರೆಗೆ ವಿಲ್ಸನ್‌ ಗಾರ್ಡನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಡಿಸಿಪಿ ಶೇಖರ್ ಎಚ್‌ಟಿ ಈ ಕುರಿತು ಮಾದ್ಯಮಗಳ ಜೊತೆ ಮಾತನಾಡಿದ್ದು,ವರ್ಷಿಣಿ ಅವರ ತಂದೆ ಪೊಲೀಸ್ ದೂರು ದಾಖಲಿಸಿದ್ದಾರೆ ಮತ್ತು ಮರಣೋತ್ತರ ಪರೀಕ್ಷೆಯ ನಂತರ ಆಕೆಯ ದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ. ಈ ಕುರಿತು ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್