ಬೆಂಗಳೂರು;10 ವರ್ಷದ ವಿದ್ಯಾರ್ಥಿನಿ ಮೇಲೆ ಶಾಲೆಯಲ್ಲೇ
ಪ್ರಾಂಶುಪಾಲ ಅತ್ಯಾಚಾರ ಎಸಗಿರುವ ಘಟನೆ ವರ್ತೂರು ಸಮೀಪದ ಖಾಸಗಿ ಶಾಲೆಯೊಂದರಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.
ಶಾಲಾ ಸಂಸ್ಥಾಪಕ ಮತ್ತು ಪ್ರಾಂಶುಪಾಲನಾಗಿರುವ ವ್ಯಕ್ತಿಯೇ ಕೃತ್ಯ ಎಸಗಿರುವ ಆರೋಪ ಕೇಳಿ ಬಂದಿದೆ.ನಿನ್ನೆ ಎಂದಿನಂತೆ ವಿದ್ಯಾರ್ಥಿನಿ ಶಾಲೆಗೆ ತೆರಳಿದ್ದಳು.ಶಾಲೆಗೆ ಬೇಗ ಬಂದ ವಿದ್ಯಾರ್ಥಿನಿಯನ್ನು ಕಂಡ ಪ್ರಾಂಶುಪಾಲ ವಿದ್ಯಾರ್ಥಿನಿಯನ್ನು ಖಾಲಿ ರೂಮಿಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ.ಮನೆಗೆ ಬಂದ ಮಗಳು ನೋವು ತಾಳದೆ ಒದ್ದಾಡಿದನ್ನು ಕಂಡ ಪೋಷಕರು ಮಗಳ ಬಳಿ ವಿಚಾರಿಸಿ ತಕ್ಷಣ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ. ಈ ವೇಳೆ ಕೃತ್ಯ ಬಯಲಾಗಿದೆ.
ಇದೀಗ ವರ್ತೂರು ಪೊಲೀಸರು ಆರೋಪಿ ಪ್ರಾಂಶುಪಾಲರಿಗೆ ವಶಕ್ಕೆ ಪಡೆದಿದ್ದಾರೆ.
ನಿನ್ನೆ ಬೆಳಗ್ಗೆ 8.30ಕ್ಕೆ ಬಾಲಕಿ ಶಾಲೆಗೆ ತೆರಳಿದ್ದು ಮಧ್ಯಾಹ್ನ 3.30 ಕ್ಕೆ ಶಾಲೆಯಿಂದ ಮನೆಗೆ ವಾಪಸ್ಸಾಗಿದ್ದಾಳೆ. ತನ್ನ ತಾಯಿಗೆ ಹೊಟ್ಟೆ ನೋವು ಎಂದು ಹೇಳಿಕೊಂಡಿದ್ದಾಳೆ. ಸ್ನಾನ ಮಾಡಿಸಿ ಕರೆತರುವಾಗ ರಕ್ತದ ಕಲೆಗಳು ಕಂಡುಬಂದಿದೆ. ಈ ವಿಚಾರವಾಗಿ ಕೇಳಿದಾಗ ಪುಟ್ಟ ಬಾಲಕಿ ಘಟನೆ ವಿವರಿಸಿದ್ದಾಳೆ.