ಅಮೆರಿಕದಲ್ಲಿ ಚೂರಿ ಇರಿತಕ್ಕೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತೆಲಂಗಾಣದ ವಿದ್ಯಾರ್ಥಿ ಮೃತಪಟ್ಟಿದ್ದಾರೆ.
ತೆಲಂಗಾಣದ ಖಮ್ಮಂ ಮಾಮಿಲಗುಡೆಂ ಪ್ರದೇಶದ ಪುಚ್ಚಾ ವರುಣ್‌ರಾಜ್(29) ಇಂಡಿಯಾನಾ ರಾಜ್ಯದ ವಿಶ್ವವಿದ್ಯಾನಿಲಯದಲ್ಲಿ ಎಂಎಸ್ ವ್ಯಾಸಂಗ ಮಾಡುತ್ತಿದ್ದು, ಅರೆಕಾಲಿಕ ಕೆಲಸವನ್ನು ಕೂಡ ಮಾಡುತ್ತಿದ್ದರು.
ಅ.30ರಂದು ಅವರು ಜಿಮ್‌ನಿಂದ ಮನೆಗೆ ಹೋಗುತ್ತಿದ್ದಾಗ ದುಷ್ಕರ್ಮಿಗಳು ಚಾಕುವಿನಿಂದ ಹಲ್ಲೆ ನಡೆಸಿದ್ದರು.
ಇದರ ಪರಿಣಾಮವಾಗಿ ಅವರು ಗಂಭೀರವಾಗಿ ಗಾಯಗೊಂಡರು. ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕಾಗಮಿಸಿದ ಪೊಲೀಸರು ವರುಣ್‌ನನ್ನು ಆಸ್ಪತ್ರೆಗೆ ಕರೆದೊಯ್ದಿದ್ದರು.
ಕಳೆದ ತಿಂಗಳು 30ರಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವರುಣರಾಜ್ 9 ದಿನಗಳ ಕಾಲ ಜೀವನ್ಮರಣ ಹೋರಾಟ ನಡೆಸಿ ಮಂಗಳವಾರ ಮೃತಪಟ್ಟಿದ್ದರು. ಈ ಬಗ್ಗೆ ಅಮೆರಿಕದ ಅಧಿಕಾರಿಗಳು ಕುಟುಂಬದ ಸದಸ್ಯರಿಗೆ ಮಾಹಿತಿ ನೀಡಿದ್ದಾರೆ. ವರುಣನ ಮೃತದೇಹವನ್ನು ಭಾರತಕ್ಕೆ ತರಲು ಪ್ರಯತ್ನಗಳು ನಡೆಯುತ್ತಿವೆ.