ಸೌಜನ್ಯ ಪ್ರಕರಣದ ಕುರಿತು ಮಹತ್ವದ ಹೇಳಿಕೆ ಕೊಟ್ಟ ಮಾಜಿ ಶಾಸಕ ವಸಂತ ಬಂಗೇರ

ಬೆಳ್ತಂಗಡಿ;ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಕುರಿತು ಮಾಜಿ ಶಾಸಕ ವಸಂತ ಬಂಗೇರ ಅವರು ಮಹತ್ವದ ಹೇಳಿಕೆ ಕೊಟ್ಟಿದ್ದಾರೆ.

ಸೌಜನ್ಯ ಕೊಲೆ ಕುರಿತ ರಹಸ್ಯಗಳನ್ನು ಬಿಚ್ಚಿಟ್ಟರೆ ನನ್ನನ್ನು ಸಾಯಿಸಬಹುದು ಎಂದು ಬೆಳ್ತಂಗಡಿಯ ಮಾಜಿ ಶಾಸಕ ಮಾಜಿ ಶಾಸಕ ವಸಂತ ಬಂಗೇರ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಬೆಳ್ತಂಗಡಿಯಲ್ಲಿ ನಡೆದ ಆಟಿಡೊಂಜಿ ಕೂಟ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ವೇಳೆ ಸೌಜನ್ಯ ಪ್ರಕರಣವನ್ನು ಪ್ರಸ್ತಾಪಿಸಿದ ಅವರು,ನಾನು ಶಾಸಕನಾಗಿದ್ದಾಗ ಅಧಿವೇಶನದಲ್ಲಿ ಸೌಜನ್ಯ ಕೇಸ್ ಸಿಬಿಐಗೆ ವಹಿಸಲು ಆಗ್ರಹಿಸಿದ್ದೆ.ಬೆಳ್ತಂಗಡಿಯಲ್ಲಿ ನಡೆದ ಅಮಾನುಷ ಹತ್ಯೆಗಳ ಬಗ್ಗೆ ಅವರಿಗೆ ಮನವರಿಕೆ ಮಾಡಿದ್ದೆ. ಕೊನೆಗೆ ಸಿದ್ದರಾಮಯ್ಯನವರು ಅಧಿವೇಶನದಲ್ಲಿ ಸೌಜನ್ಯಾ ಪ್ರಕರಣವನ್ನು ಸಿಬಿಐಗೆ ವಹಿಸುತ್ತೇನೆ ಎಂದಿದ್ದರು.
ಇನ್ನು ಸಿಬಿಐ ತನಿಖೆಯಲ್ಲಿ ನ್ಯಾಯ ಸಿಗುತ್ತೆ ಎಂಬ ಭಾವನೆ, ನಂಬಿಕೆ ನನಗಿತ್ತು.ಆದರೆ ಸಿಬಿಐ ತನಿಖೆ ಅರ್ಧದಲ್ಲಿರುವಾಗಲೇ ಇದರಲ್ಲಿ ಮೋಸ ಆಗಿದೆ ಎನ್ನೋದು ತಿಳಿದು ಬಂತು ಎಂದು ಹೇಳಿದ್ದಾರೆ.

ಇದರಲ್ಲಿ ಆದ ಮೋಸ ಏನು? ಯಾರು ಕಾರಣ ಅಂತ ಅದನ್ನು ಸಾರ್ವಜನಿಕವಾಗಿ ಹೇಳಲು ಸಾಧ್ಯವಿಲ್ಲ.ಆದರೆ ಸಂದರ್ಭ ಬಂದಾಗ ಈ ವಿಚಾರ ಹೇಳುತ್ತೇನೆ.ಸೌಜನ್ಯ ಪ್ರಕರಣದ ದಿಕ್ಕು ತಪ್ಪಿಸಿದ್ದು ಯಾರು? ಅನ್ಯಾಯ, ತೊಂದರೆ ಕೊಟ್ಟಿದ್ದು ಯಾರು ಎಂದು ಹೇಳುತ್ತೇನೆ.ಅದಕ್ಕೂ ಮೊದಲು ನನ್ನನ್ನು ಸಾಯಿಸಿದ್ರೂ ಸಾಯಿಸಬಹುದು.ಸಾಯಿಸಲು ಅಷ್ಟು ಸುಲಭ ಇಲ್ಲ.ನಾನೂ ದೈವ ಭಕ್ತ.ಆದರೆ ನಾನು ಸಾಯೋದ್ರೊಳಗೆ ಸೌಜನ್ಯ ಪ್ರಕರಣಕ್ಕೆ ನ್ಯಾಯ ಕೊಡಿಸಲು ಸಿದ್ಧ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್