ಮುದುಕನೋರ್ವ ಮುಚ್ಚಿ ಹೋಗಿದ್ದ ನ್ಯಾಷನಲ್ ಹೆರಾಲ್ಡ್ ಪ್ರಕರಣ ರೀ‌ ಓಪನ್ ಮಾಡಿದ; ವೀರಪ್ಪ‌ ಮೊಯ್ಲಿ

ದೊಡ್ಡಬಳ್ಳಾಪುರ;ಎಂದೋ ಮುಚ್ಚಿ ಹೋಗಿದ್ದ ಪ್ರಕರಣವನ್ನ ಸುಬ್ರಮಣ್ಯ ಎಂಬ ಮುದುಕ ರೀ ಓಪನ್ ಮಾಡಿದ್ದಾನೆ ಎಂದು ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಕಿಡಿ ಕಾರಿದ್ದಾರೆ.

ದೊಡ್ಡಬಳ್ಳಾಪುರದ ಬೆಸೆಂಟ್ ಪಾರ್ಕ್​ನಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಪಕ್ಷದ ನವ ಸಂಕಲ್ಪ ಶಿಬಿರದಲ್ಲಿ ಮಾತನಾಡಿದ ವೀರಪ್ಪ ಮೊಯ್ಲಿ, ಈ ಹಿಂದೆ ಇಂದಿರಾ ಗಾಂಧಿಯನ್ನು ಬಂಧಿಸಿ ಒಂದೇ ದಿನದಲ್ಲಿ ಸರ್ಕಾರ ಬಿದ್ದು ಹೋಯ್ತು. ಹಾಗೆಯೇ ಈ ಪ್ರಕರಣದಲ್ಲಿ ಹೆಚ್ಚು ಕಡಿಮೆಯಾದರೆ, ಸರ್ಕಾರವೇ ಮುಳುಗಿ ಹೋಗುತ್ತದೆ ಎಂದು‌ ಹೇಳಿದ್ದಾರೆ.

ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೂ ಸ್ವಾತಂತ್ರ್ಯ ಹೋರಾಟಕ್ಕೂ ಸಂಬಂಧವಿದೆ. ಸ್ವಾತಂತ್ರ್ಯ ಹೋರಾಟಕ್ಕೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ದೊಡ್ಡ ಕೊಡುಗೆ ನೀಡಿದೆ. ಇಂತಹ ಪತ್ರಿಕೆಯನ್ನು ಮುಂದುವರೆಸಿಕೊಂಡು ಹೋಗಲು ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಬಹಳ ಶ್ರಮ ಪಟ್ಟಿದ್ದಾರೆ. ಈ ಕೇಸ್ ಈಗಾಗಲೇ ಮುಚ್ಚಿಹೋಗಿತ್ತು, ಸುಬ್ರಮಣ್ಯಸ್ವಾಮಿ ಎನ್ನುವ ಮುದುಕ ಮತ್ತೆ ಈ ಕೇಸ್ ಓಪನ್ ಮಾಡಿದ್ದು, ಇದು ಬಿಜೆಪಿ ಪಕ್ಷಕ್ಕೆ ಅನುಕೂಲವಾಗಿದೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್