ಬೆಂಗಳೂರು;ಇಬ್ಬರು ಮಕ್ಕಳನ್ನು ಕೊಂದು ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಕಾಡುಗೋಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಆಂಧ್ರ ಮೂಲದ ವೀರಾರ್ಜುನ ವಿಜಯ್ (31), ಪತ್ನಿ ಹೇಮಾವತಿ(29)ಅವರು ಇಬ್ಬರು ಮಕ್ಕಳಾದ ಮೋಕ್ಷಾ, ಸೃಷ್ಟಿಗೆ ಕೊಲೆ ಮಾಡಿ ತಾವು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಶೀಗೆಹಳ್ಳಿಯ ಅಪಾರ್ಟ್ಮೆಂಟ್ ಒಂದರಲ್ಲಿ ಈ ಘಟನೆ ಸಂಭವಿಸಿದೆ.ಮೃತ ವೀರಾರ್ಜುನ್ ಸಾಫ್ಟ್ ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಎಂದು ಹೇಳಲಾಗುತ್ತಿದೆ.
ಆತ್ಮಹತ್ಯೆಗೂ ಮುನ್ನ ಮಕ್ಕಳನ್ನು ಕೊಲೆಗೈದು ಪತ್ನಿಯೊಂದಿಗೆ ವೀರಾರ್ಜುನ ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ.
ಸ್ಥಳಕ್ಕೆ ಕಾಡುಗೋಡಿ ಠಾಣಾ ಪೊಲೀಸರು ಹಾಗೂ ಎಫ್‌ಎಸ್‌ಎಲ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.