ಮಲ್ಲಿಕಾರ್ಜುನ ಖರ್ಗೆಗೆ 100 ಕೋಟಿ ಪರಿಹಾರ ಕೊಡುವಂತೆ ನೊಟೀಸ್ ನೀಡಿದ ವಿಶ್ವ ಹಿಂದೂ ಪರಿಷತ್!

ನವದೆಹಲಿ;ವಿಶ್ವ ಹಿಂದೂ ಪರಿಷತ್ ಮತ್ತು ಅದರ ಯುವ ಘಟಕ ಬಜರಂಗದಳದ ಚಂಡೀಗಢ ಘಟಕವು ಮೇ 4 ರಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಲೀಗಲ್ ನೋಟಿಸ್ ಜಾರಿ ಮಾಡಿದೆ.

ಕರ್ನಾಟಕ ಚುನಾವಣಾ ಪ್ರಣಾಳಿಕೆಯಲ್ಲಿ ಬಜರಂಗದಳದ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದೆ ಎಂದು ಆರೋಪಿಸಿ ವಿಎಚ್‌ಪಿ 100 ಕೋಟಿಗೂ ಹೆಚ್ಚು ಪರಿಹಾರ ನೀಡುವಂತೆ ಒತ್ತಾಯಿಸಿದೆ‌.

ಕರ್ನಾಟಕದಲ್ಲಿ ಮೇ10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ, ಭಜರಂಗದಳ ಮತ್ತು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ದಂತಹ ವ್ಯಕ್ತಿಗಳು ಮತ್ತು ಸಂಘಟನೆಗಳ ವಿರುದ್ಧ ದ್ವೇಷವನ್ನು ಹರಡುವ ಆರೋಪದ ಮೇಲೆ ದೃಢ ಮತ್ತು ನಿರ್ಣಾಯಕ ಕ್ರಮವನ್ನು ತೆಗೆದುಕೊಳ್ಳಲು ಕಾಂಗ್ರೆಸ್ ಬದ್ಧವಾಗಿದೆ ಹೇಳಿದೆ. ಅಂತಹ ಸಂಘಟನೆಗಳ ವಿರುದ್ಧ ಪಕ್ಷವು ‘ನಿಷೇಧ’ದ ಭರವಸೆ ನೀಡಿತ್ತು.

ಪುಟ 10ರಲ್ಲಿನ ಪ್ರಣಾಳಿಕೆಯಲ್ಲಿ ನೀವು ಬಜರಂಗದಳವನ್ನು ನಿಷೇಧಿಸುವುದಾಗಿ ಘೋಷಿಸುವ ಮೂಲಕ ಮಾನಹಾನಿಕರ ಹೇಳಿಕೆಗಳನ್ನು ನೀಡಿದ್ದೀರಿ ಮತ್ತು ಅದನ್ನು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮತ್ತು ಸ್ಟೂಡೆಂಟ್ಸ್ ಇಸ್ಲಾಮಿಕ್ ನಂತಹ ಕಾನೂನುಬಾಹಿರ ಭಯೋತ್ಪಾದಕ ಸಂಘಟನೆಗಳಿಗೆ ಹೋಲಿಸಿದ್ದೀರಿ ಎಂದು ವಿಎಚ್‌ಪಿಯ ವಕೀಲ ಮತ್ತು ಅದರ ಕಾನೂನು ಕೋಶದ ಸಹ ಮುಖ್ಯಸ್ಥ ಸಾಹಿಲ್ ಬನ್ಸಾಲ್ ಕಾನೂನು ನೋಟಿಸ್‌ನಲ್ಲಿ ನೀಡಿದ್ದಾರೆ ಎಂದು ವರದಿಯಾಗಿದೆ.

ಭಜರಂಗದಳವು “ಸಾರ್ವತ್ರಿಕತೆ, ಸಹಿಷ್ಣುತೆ, ಧಾರ್ವಿುಕ ಏಕತೆ, ರಾಷ್ಟ್ರೀಯ ಸಮಗ್ರತೆ ಮತ್ತು ಭಾರತ ಮಾತೆಯ ಸೇವೆಯಲ್ಲಿ ನಂಬಿಕೆ ಹೊಂದಿದೆ ಎಂದು ಹೇಳಿದ ಬನ್ಸಾಲ್, ಇದು ಭಗವಾನ್ ರಾಮ ಮತ್ತು ಭಗವಾನ್ ಹನುಮಾನ್ ಅವರಿಂದ ಸ್ಫೂರ್ತಿ ಪಡೆಯುತ್ತದೆ ಎಂದು ಉಲ್ಲೇಖಿಸಿ ನೊಟೀಸ್ ನೀಡಿದ್ದಾರೆ‌.

ಟಾಪ್ ನ್ಯೂಸ್

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ ಉದ್ವಿಗ್ನತೆ, ನಿಷೇಧಾಜ್ಞೆ ಜಾರಿ

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ ಹಣ ಪಡೆಯಲು ಯತ್ನಿಸಿದ ಮಹಿಳೆ; ವಿಷಯ ಗೊತ್ತಾಗಿ ಪತಿಯೇ ಪತ್ನಿಯ ವಿರುದ್ಧ ದೂರು ಕೊಟ್ಟ!

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ

ಮರದ ಪೆಟ್ಟಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಪತ್ತೆ; ಮಕ್ಕಳು ಆಟವಾಡುವಾಗ ಆಕಸ್ಮಿಕವಾಗಿ ಉಸಿರುಗಟ್ಟಿ ಮೃತಪಟ್ಟಿರುವ ಶಂಕೆ

ನವದೆಹಲಿ; ಮರದ ಪೆಟ್ಟಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಪತ್ತೆಯಾಗಿರುವ ಶಾಕಿಂಗ್ ಘಟನೆ ರಾಷ್ಟ್ರ

Developed by eAppsi.com