ರಾಜ್ಯದ 224 ಕ್ಷೇತ್ರಗಳಲ್ಲಿ ಒಟ್ಟು ಎಷ್ಟು ಸಾವಿರ ಅಭ್ಯರ್ಥಿಗಳು ಕಣದಲ್ಲಿದ್ದಾರೆ ಗೊತ್ತಾ?ಇಲ್ಲಿದೆ ಚುನಾವಣೆಗೆ ಸಂಬಂಧಿಸಿದ ಕೆಲ ಮಾಹಿತಿ…

ಬೆಂಗಳೂರು;ರಾಜ್ಯ ವಿಧಾನಸಭೆ ಚುನಾವಣೆಗೆ ನಾಳೆ ಮತದಾನ ನಡೆಯಲಿದೆ.224 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, 2615 ಅಭ್ಯರ್ಥಿಗಳ ಭವಿಷ್ಯವನ್ನು ನಾಳೆ ಮತದಾರರು ನಿರ್ಧರಿಸಲಿದ್ದಾರೆ

ಈ ಬಾರಿ ರಾಜಕೀಯ ಪಕ್ಷಗಳಿಂದ 5053 ನಾಮಪತ್ರಗಳು ಸಲ್ಲಿಕೆಯಾಗಿದ್ದವು. ಅದರಲ್ಲಿ 3953 ಸ್ವೀಕೃತವಾದರೆ, 502 ತಿರಸ್ಕೃತವಾಗಿವೆ. 563 ನಾಮಪತ್ರ ವಾಪಸ್​ ಪಡೆದಿದ್ದಾರೆ.

ಪ್ರಸ್ತುತ 2615 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಇದರಲ್ಲಿ 2429 ಪುರುಷ ಅಭ್ಯರ್ಥಿಗಳಿದ್ದರೆ, 185 ಮಹಿಳಾ ಅಭ್ಯರ್ಥಿಗಳು, ಓರ್ವ ತೃತೀಯ ಲಿಂಗಿ, 918 ಪಕ್ಷೇತರರು ಕಣದಲ್ಲಿದ್ದಾರೆ.

224 ಕ್ಷೇತ್ರಗಳಿಗೆ ನಡೆಯುವ ಚುನಾವಣೆಯಲ್ಲಿ ರಾಜ್ಯದಲ್ಲಿ ಒಟ್ಟು 5,21,76,579 ಕೋಟಿ ಮತದಾರರು ಇದ್ದಾರೆ. ಇದರಲ್ಲಿ 2,62,42,561 ಪುರುಷ ಮತದಾರರು ಹಾಗೂ 2,59,26,319 ಮಹಿಳಾ, 4839 ಇತರ ಮತದಾರರು ಇದ್ದಾರೆ. 5,55,073 ವಿಶೇಷ ಚೇತನ ಮತದಾರರು, 80 ವರ್ಷಕ್ಕೂ ಹೆಚ್ಚಿನ ವಯಸ್ಸಿನ 12,15,763 ಮತ್ತು 100 ವಯಸ್ಸು ದಾಟಿರುವ 16,976 ಮತದಾರರಿದ್ದಾರೆ. ಮೊದಲ ಬಾರಿಗೆ 9,17,241 ಮತದಾರರು ನೋಂದಣಿಯಾಗಿದ್ದಾರೆ.

ಮತದಾನದ ದಿನ ಯಾವುದೇ ಅಹಿತರ ಘಟನೆ ನಡೆಯದಂತೆ ತಡೆಯಲು 1.5 ಲಕ್ಷ ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. 464 ಪ್ಯಾರಾಮಿಲಿಟರಿ ಫೋರ್ಸ್, 304 ಡಿವೈಎಸ್​ಪಿ, 991 ಇನ್ಸ್​ಪೆಕ್ಟರ್​ಗಳು ಸೇರಿ 84 ಸಾವಿರ ಪೊಲೀಸರಿಂದ ಬಂದೋಬಸ್ತ್ ಇರಲಿದೆ. 185 ಬಾರ್ಡರ್ ಚೆಕ್‌ಪೋಸ್ಟ್​ಗಳನ್ನು ಮಾಡಲಾಗಿದೆ.

ಇನ್ನು ಒಟ್ಟು 16 ಕ್ಷೇತ್ರಗಳಲ್ಲಿ 16ಕ್ಕೂ ಹೆಚ್ಚು ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಇಲ್ಲಿ ಎರಡೆರಡು ಮತಯಂತ್ರಗಳನ್ನು ಬಳಸಲಾಗುವುದು. ಒಂದು ಇವಿಎಂನಲ್ಲಿ ಗರಿಷ್ಠ 16 ಅಭ್ಯರ್ಥಿಗಳ ಹೆಸರು ಹಾಗೂ ಚಿಹ್ನೆಗೆ ವ್ಯವಸ್ಥೆ ಇರುತ್ತದೆ. ಅದಕ್ಕಿಂತ ಹೆಚ್ಚಾದರೆ ಪ್ರತಿ 16 ಅಭ್ಯರ್ಥಿಗಳಿಗೆ ಒಂದರಂತೆ ಹೆಚ್ಚುವರಿ ಮತಯಂತ್ರಗಳ ವ್ಯವಸ್ಥೆ ಮಾಡಲಾಗಿದೆ ಎನ್ನಲಾಗಿದೆ.

ಟಾಪ್ ನ್ಯೂಸ್

ಪ್ರವೀಣ್ ನೆಟ್ಟಾರು ಪತ್ನಿಗೆ ತೋರಿದ ಮಾನವೀಯತೆ ಫಾಝಿಲ್ & ಮಸೂದ್ ಕುಟುಂಬಕ್ಕೆ ತೋರಿಸುತ್ತಾರ ಸಿದ್ದರಾಮಯ್ಯ?ಬಿಜೆಪಿ ಅವಧಿಯಲ್ಲಿ ಹತ್ಯೆಯಾದ ಯುವಕರಿಬ್ಬರ ಕುಟುಂಬಕ್ಕೆ ಪರಿಹಾರ ಕೊಡಿಸುವಲ್ಲಿ‌ ಕಾಂಗ್ರೆಸ್ಸಿಗರು ಮೌನ?

BIG NEWS ತೀವ್ರಗೊಂಡ ಮಹಿಳಾ ಕುಸ್ತಿಪಟುಗಳ ಪ್ರತಿಭಟನೆ, ನೂತನ ಸಂಸತ್ ಭವನಕ್ಕೆ ಮೆರವಣಿಗೆ ತೆರಳಲು ಯತ್ನ; ಸಾಕ್ಷಿ ಮಲಿಕ್, ವಿನೇಶ್ ಪೋಗಟ್ ಸೇರಿ ಹಲವರು ವಶಕ್ಕೆ

ನವದೆಹಲಿ;ನೂತನ ಸಂಸತ್​ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲು ಯತ್ನಿಸುತ್ತಿದ್ದ ಕುಸ್ತಿಪಟುಗಳನ್ನು ಪೊಲೀಸರು ಬಂಧಿಸಿದ್ದಾರೆ.

Developed by eAppsi.com