ಶಾಲೆಯಲ್ಲಿ ಪಾಠ ಮಾಡುವಾಗಲೇ ಕುಸಿದು ಬಿದ್ದು ಶಿಕ್ಷಕ ಮೃತ್ಯು

ದಾವಣಗೆರೆ;ಮಕ್ಕಳಿಗೆ ಪಾಠ ಮಾಡುವಾಗಲೇ ಶಿಕ್ಷಕ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟ ಘಟನೆ ನಡೆದಿದೆ.

ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಭಾನುವಳ್ಳಿ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಘಟನೆ ನಡೆದಿದ್ದು ಇಂಗ್ಲೀಷ್ ವಿಷಯದ ಶಿಕ್ಷಕ ವಿಜಯ್ ಕುಮಾರ್ (54) ಮೃತರು.

ವಿಜಯ್ ಕುಮಾರ್ ಬೆಳಗ್ಗೆ ಶಾಲೆಯಲ್ಲಿ ಪ್ರಾರ್ಥನೆ ಮುಗಿಸಿ ಮಕ್ಕಳಿಗೆ ಪಾಠ ಮಾಡುತ್ತಿದ್ದರು. ಈ ವೇಳೆ ಹೃದಯಾಘಾತಕ್ಕೆ ಒಳಗಾಗಿ ಕುಸಿದು ಬಿದ್ದಿದ್ದು ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.ಆದರೆ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ.

ಟಾಪ್ ನ್ಯೂಸ್

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮತ್ತೆ ಮುಂದೂಡಿಕೆ;ಪಟ್ಟಿ ಬಿಡುಗಡೆ ವಿಳಂಬವಾಗುತ್ತಿರುವುದೇಕೆ? ಈ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?

ಬೆಂಗಳೂರು;ವಿಧಾನಸಭಾ ಚುನಾವಣೆ ಹಿನ್ನೆಲೆ ಇಂದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ನಿರೀಕ್ಷೆ

Developed by eAppsi.com