ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

ವಿಜಯನಗರ;ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ನೀಲಗುಂದ ಗ್ರಾಮದಲ್ಲಿ ನಡೆದಿದೆ.

ತಾಯಿ ಭವ್ಯಾ(36), ಕಾವ್ಯಾ(14), ಅಮೂಲ್ಯ(10) ನೇಣಿಗೆ ಶರಣಾಗಿದ್ದಾರೆ. ಕೌಟುಂಬಿಕ ಕಲಹದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಕಳೆದ ಮೂರು ದಿನಗಳಿಂದ ಪತಿ ಮನೆಗೆ ಬಂದಿರಲಿಲ್ಲ. ಪತಿ ಇಲ್ಲದ ವೇಳೆ ಇಬ್ಬರು ಮಕ್ಕಳೊಂದಿಗೆ ಪತ್ನಿ ಭವ್ಯಾ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ವರದಿಯಾಗಿದೆ.

ಹಲವಾಗಲು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಟಾಪ್ ನ್ಯೂಸ್